Ad Widget

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ಸಂಭ್ರಮ

ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ಸಂಭ್ರಮ-2026 ಇಂದು(ಫೆ. 9) ಬೆಳಿಗ್ಗೆ 11 ಘಂಟೆಗೆ ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಬೆಳ್ಳಾರೆ ಅಂಗನವಾಡಿಯ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೇವಿಕಾ ‌ಕೆ .ಅಧ್ಯಕ್ಷತೆಯನ್ನು ವಹಿಸಿದ್ದರು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್.ರೈ ಉದ್ಘಾಟನೆ ಕಾರ್ಯ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತಿನ‌ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ  ಉಪಸ್ಥಿತರಿದ್ದರು.

ಎಣ್ಮೂರು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಲಿಂಗಪ್ಪ ಬೆಳ್ಳಾರೆ ಮುಖ್ಯ ಮಾತನ್ನಾಡಿದರು.

ಅತಿಥಿಗಳಾಗಿ ಬೆಳ್ಳಾರೆ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿಗಳಾದ ಡಾ. ಬಿ.ಕೆ.ಸೂರ್ಯನಾರಾಯಣ ಭಟ್, ಸುಳ್ಯದ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ, ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ವಸಂತ ಗೌಡ ಪಡ್ಪು
ಉಪಸ್ಥಿತರಿದ್ದರು.

ಬೆಳ್ಳಾರೆ ಗ್ರಾಮ ಪಂಚಾಯತಿನಿಂದ ಬೆಳ್ಳಾರೆ ಅಂಗನವಾಡಿಗೆ ನೀಡಿದ ಸಹಕಾರಕ್ಕಾಗಿ ಮಾಜಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಪನ್ನೆ ಹಾಗೂ ಹಾಲಿ ಅಧ್ಯಕ್ಷೆ ನಮಿತಾ ಎಲ್.ರೈಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬೆಳ್ಳಾರೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೇವಿಕಾ ಕೆ.ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಭಾರತಿ ವಂದಿಸಿದರು.

ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading