Ad Widget

ಹರಿಹರ ಪಳ್ಳತ್ತಡ್ಕ : ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ “ಕಾಫಿ ಬೆಳೆ ಹಾಗೂ ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.) ಹರಿಹರ ಪಳ್ಳತ್ತಡ್ಕ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ಸಹಯೋಗದೊಂದಿಗೆ “ಕಾಫಿ ಬೆಳೆ ಹಾಗೂ ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”ವು ಸಂಘದ ಪ್ರಧಾನ ಕಛೇರಿಯಲ್ಲಿ ಫೆ.11 ರಂದು ನಡೆಯಿತು.
ಸಂಘದ ಅಧ್ಯಕ್ಷರಾದ ಡಾ.ಸೋಮಶೇಖರ್ ಕಟ್ಟೆಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪ್ರಗತಿಪರ ಕೃಷಿಕರಾದ ಚಂದ್ರಶೇಖರ ಕಜ್ಜೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುಳ್ಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್.ಸಿ.ಎಂ ಉಪಸ್ಥಿತರಿದ್ದರು.

ಕೇಂದ್ರ ಕಾ.ಸಂ.ಕೇಂದ್ರ ಚಟ್ಟಳ್ಳಿ ಮಡಿಕೇರಿಯ ವಿಜ್ಞಾನಿಗಳಾದ ಡಾ.ನದಾಫ್ ಕಾಫಿ ಬೆಳೆಯ ಬಗ್ಗೆ ಹಾಗೂ ಪ್ರಗತಿಪರ ಕೃಷಿಕರು ಮತ್ತು ಕೃಷಿ ವಿಜ್ಞಾನ ಕೇಂದ್ರದಿಂದ ಗುರುತಿಸಲ್ಪಟ್ಟ ಕಾಳುಮೆಣಸು ಕೃಷಿಯ ಸಂಪನ್ಮೂಲ ವ್ಯಕ್ತಿಗಳಾದ ಸುರೇಶ್ ಬಲ್ನಾಡು ಕಾಳುಮೆಣಸು ಕೃಷಿಯ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ ಮಣಿಯಾನಮನೆ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್ ಅಂಙಣ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಕಟ್ಟ ಉಪಸ್ಥಿತರಿದ್ದರು.

ಸಂಘದ ಸಿಬ್ಬಂದಿ ಶ್ರೀಮತಿ ದಿವ್ಯಾ ಪ್ರಾರ್ಥನೆ ನೆರವೇರಿಸಿದರು.
ಪ್ರಮೋದ್.ಸಿ.ಯಂ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಗಣೇಶ್ ಭಟ್ ಇಡ್ಯಡ್ಕ ಸ್ವಾಗತಿಸಿ ಹಿಮ್ಮತ್.ಕೆ.ಸಿ ಧನ್ಯವಾದ ಸಮರ್ಪಿಸಿದರು.
ಶ್ರೀಮತಿ ಪುಷ್ಪಾ ಗುಡ್ಡೆಮನೆ ಕಾರ್ಯಕ್ರಮ ನಿರೂಪಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading