Ad Widget

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಫೆ.24ರಂದು “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ; ಭಾಷಾ ವಿಚಾರ ಸಂಕಿರಣ, ಅರೆಭಾಷಾ ವಿಚಾರ ಸಂಕಿರಣ ಹಾಗೂ ಅರೆಭಾಷೆ ಸಂಸ್ಕೃತಿ ವಿಚಾರ ಸಂಕಿರಣ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇವರ ಸಹಯೋಗದಲ್ಲಿ ‘ಸುವರ್ಣ ಮಹೋತ್ಸವ’ ಸಂಭ್ರಮಾಚರಣೆಯ ಪ್ರಯುಕ್ತ ಫೆ.24 ರಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕೆ.ವಿ.ಜಿ ಷಷ್ಟ್ಯಬ್ಧ ರಂಗಮಂದಿರದಲ್ಲಿ “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9:30ಕ್ಕೆ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಎ.ಒ.ಎಲ್.ಇ(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಒ.ಎಲ್.ಇ(ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಅಕ್ಷಯ್.ಕೆ.ಸಿ ರವರು ಉಪಸ್ಥಿತರಿರಲಿದ್ದು, ನೆಹರು ಮೆಮೋರಿಯಲ್ ಕಾಲೇಜಿನ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್.ಎಂ.ಎಂ, ನೆಹರು ಮೆಮೋರಿಯಲ್ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಿಥಾಲಿ.ಪಿ ರೈ ಹಾಗೂ ನೆಹರು ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೆ.ಟಿ ವಿಶ್ವನಾಥ್ ರವರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಬೆಳಿಗ್ಗೆ 10:30 ರಿಂದ 12:00 ರವರೆಗೆ ‘ಭಾಷಾ ವಿಚಾರ ಸಂಕಿರಣ’ ನೆರವೇರಲಿದ್ದು, ವಿದ್ವಾಂಸರು ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಕೆ.ಚಿನ್ನಪ್ಪ ಗೌಡ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ರವರು ‘ಪ್ರಾದೇಶಿಕ ಭಾಷೆಗಳು ಎದುರಿಸುತ್ತಿರುವ ಸವಾಲುಗಳು’ ಎಂಬ ವಿಷಯದ ಕುರಿತು ಹಾಗೂ ಸಾಹಿತಿಗಳು ಮತ್ತು ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ರವರು ‘ಜಾಗತೀಕರಣ ಮತ್ತು ಸಾಂಸ್ಕೃತಿಕ ಪಲ್ಲಟಗಳು’ ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಮದ್ಯಾಹ್ನ 12:00 ರಿಂದ 1:15 ರವರೆಗೆ ‘ಅರೆಭಾಷಾ ವಿಚಾರ ಸಂಕಿರಣ’ ನಡೆಯಲಿದ್ದು, ಹಿರಿಯ ಚಿಂತಕರು ಹಾಗೂ ಸಾಹಿತಿಗಳಾದ ಪ್ರೋ. ಕೆ.ಇ ರಾಧಾಕೃಷ್ಣ ಬೆಂಗಳೂರು ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾದ ವಿಶ್ರಾಂತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ ರವರು ‘ಅರೆಭಾಷೆನ ಅನನ್ಯತೆಗ’ ಎಂಬ ವಿಷಯದ ಕುರಿತು ಹಾಗೂ ಐಕಳ ಪಾಂಪೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪುರುಷೋತ್ತಮ ಕರಂಗಲ್ಲು ರವರು ‘ಅರೆಭಾಷೆ – ಪ್ರಾದೇಶಿಕ ಭಿನ್ನತೆಗ’ ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಊಟದ ಬಳಿಕ 1:15 ರಿಂದ 2:00 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮದ್ಯಾಹ್ನ 2:00 ಗಂಟೆಯಿಂದ 3:30 ರವರೆಗೆ ‘ಅರೆಭಾಷೆ ಸಂಸ್ಕೃತಿ ವಿಚಾರ ಸಂಕಿರಣ’ ನಡೆಯಲಿದ್ದು, ಪ್ರಾಧ್ಯಾಪಕರಾದ ಪಟ್ಟಡ ಶಿವಕುಮಾರ್ ಮೈಸೂರು ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾದ ಕೊಡಿಯಾಲಬೈಲು ಎಂ.ಜಿ.ಎಂ ಪ್ರೌಢಶಾಲಾ ಸಂಚಾಲಕರಾದ ದೊಡ್ಡಣ್ಣ ಬರಮೇಲು ರವರು ‘ಅರೆಭಾಷಿಕರ ಮೊದುವೆ ಪದ್ಧತಿಗಳ್ಲಿ ಬದಲಾವಣೆಗ’ ಎಂಬ ವಿಷಯದ ಕುರಿತು, ಪತ್ರಕರ್ತರಾದ ಜಯಪ್ರಕಾಶ್ ಕುಕ್ಕೆಟ್ಟಿ ರವರು ‘ಸಿದ್ಧವೇಷ – ಅರೆಭಾಷಿಕರ ಜಾನಪದ ನೃತ್ಯ’ ಎಂಬ ವಿಷಯದ ಕುರಿತು, ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಕರುಣಾಕರ ನಿಡಿಂಜಿ ರವರು ‘ಅರೆಭಾಷಿಕರ ದೈವಾರಾಧನೆ’ ಎಂಬ ವಿಷಯದ ಕುರಿತು ಹಾಗೂ ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ದಯಾನಂದ ಕೊಡಕಂಡಿ ರವರು ‘ಕೊಡಗಿನ ಅರೆಭಾಷಿಕರ ಹಬ್ಬ ಹರಿದಿನಗ’ ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಲಿದ್ದು, ಅರೆಭಾಷೆಯನ್ನು ಉಳಿಸಿ-ಕಲಿಸಿ-ಬೆಳೆಸುವ ನಿಟ್ಟಿನಲ್ಲಿ ನಡೆಯುತ್ತಿರುವಂತಹ ಈ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟಕರು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading