Ad Widget

ಸುಬ್ರಹ್ಮಣ್ಯ : ಫೆ.26 ರಂದು ಕೆ.ಎಸ್.ಎಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಕೆ.ಎಸ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೆಡ್ ಕ್ರಾಸ್ ಯೂನಿಟ್, ರೋವರ್ಸ್ ಅಂಡ್ ರೇಂಜರ್ಸ್ ಯೂನಿಟ್ ಹಾಗೂ ಇಂಟರ್ನಲ್ ಕ್ವಾಲಿಟಿ ಅಸೂರೆನ್ಸ್ ಸೆಲ್ ಇವುಗಳ ಜಂಟಿ ಆಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಲಿದ್ದು, ಈ ಶಿಬಿರವು ಸ್ವಯಂ ಪ್ರೇರಿತ ರಕ್ತದಾನ ಶಿಬಿರವಾಗಿದ್ದು, ಸಾರ್ವಜನಿಕರು ಕೂಡ ಬಂದು ರಕ್ತದಾನ ಮಾಡಬಹುದಾಗಿದ್ದು, ಸಮಾಜ ಸೇವೆಯ ಮಹತ್ವವನ್ನು ಮನದಟ್ಟುಗೊಳಿಸುವ ಉದ್ದೇಶದಿಂದ ಈ ಶಿಬಿರವನ್ನು ನಡೆಸಲಾಗುತ್ತಿದೆ. ರಕ್ತದಾನವು ಜೀವ ಉಳಿಸುವ ಮಹತ್ತರ ದಾನವಾಗಿದ್ದು ತುರ್ತು ಪರಿಸ್ಥಿತಿಗಳಲ್ಲಿ ಅನೇಕ ರೋಗಿಗಳಿಗೆ ಇದು ಜೀವಧಾರೆಯಾಗಿದೆ. ಆದ್ದರಿಂದ ಸಾರ್ವಜನಿಕರು ಈ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕೆ.ಎಸ್.ಎಸ್ ಕಾಲೇಜನ್ನು ಸಂಪರ್ಕಿಸಬಹುದಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading