Ad Widget

ಸುಳ್ಯ ತಾಲೂಕು ಜನಜಾಗ್ರತಿ ವೇದಿಕೆ ಪದಾಧಿಕಾರಿಗಳ ಸಭೆ

ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಸುಳ್ಯ ತಾಲೂಕು ಇದರ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯು ಸುಳ್ಯ ಯೋಜನ ಕಚೇರಿ ಸಭಾಂಗಣದಲ್ಲಿ

. . . . . . . . .

ತಾಲೂಕು ಅಧ್ಯಕ್ಷರಾದ ಲೋಕನಾಥ್ ಅಮೆಚೂರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. 

. . . . . . .

ಸುಳ್ಯ ತಾಲೂಕು ಕ್ಷೇತ್ರ ಯೋಜನಾಧಿಕಾರಿಗಳಾದ ಮಾಧವ ಗೌಡ ವಾರ್ಷಿಕ ವರದಿ ವಾಚಿಸಿದರು. ದಕ್ಷಿಣ ಕನ್ನಡ ಜಿಲ್ಲೆ -2 ನಿರ್ದೇಶಕರಾದ ಬಾಬು ನಾಯ್ಕ ಮಾತನಾಡಿ “ಜನಜಾಗ್ರತಿ ಕಾರ್ಯಕ್ರಮಗಳಾದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇನ್ನಷ್ಟು ಪರಿಣಾಮಕಾರಿ ಆಗಿ ನಡೆಯಬೇಕು ಹಾಗೂ ನವಜೀವನ ಸದಸ್ಯರ ಅನುಪಾಲನೆ ಮಾಡಿ ಅವರು ನಮ್ಮ ಜತೆ ಸಕ್ರಿಯವಾಗಿ ಇರುವಂತಾಗಬೇಕು” ಎಂದರು.

ಜನಜಾಗೃತಿ ವಿಭಾಗದ ಪ್ರಾದೇಶಿಕ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ರವರು 2025-26ನೇ ಸಾಲಿನ ಕ್ರಿಯಾ ಯೋಜನೆಯ ಗುರಿ ಸಾಧನೆ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಸುಳ್ಯ ಯೋಜನಾ ಕಚೇರಿ ವ್ಯಾಪ್ತಿಯ ವಲಯವಾರು ಸಾಧನ ವರದಿಯನ್ನು ಮಂಡಿಸಲಾಯಿತು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯವೈಖರಿಯ ಅಂಕಿ ಅಂಶಗಳು ಹಾಗೂ ಜನಜಾಗೃತಿ ಕಾರ್ಯಕ್ರಮದ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಾಯಿತು.

ಸಭೆಯಲ್ಲಿ ಎನ್.ಆರ್ ರಾಮಚಂದ್ರ ಮಾಜಿ ಜಿಲ್ಲಾಧ್ಯಕ್ಷರು, ಶ್ರೀ ಮಹೇಶ್ ಕುಮಾರ್ ಮೇನಲ ನಿಕಟ ಪೂರ್ವ ಅಧ್ಯಕ್ಷರು, ಶ್ರೀ ಸುರೇಶ್ ಕಣೆಮರಡ್ಕ , ಶ್ರೀಮತಿ ವಿಮಲ ರಂಗಯ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುಳ್ಯ ಯೋಜನಾಧಿಕಾರಿ ಶ್ರೀ ಮಾಧವ ಗೌಡ ಸ್ವಾಗತಿಸಿ, ಜನಜಾಗೃತಿ ಮೇಲ್ವಿಚಾರಕ ಶ್ರೀ ನಿತೇಶ್ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading