Ad Widget

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು

ಭಾರತ ಸರಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡರು ಮಾ.01 ರವಿವಾರದಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4:00 ಗಂಟೆಗೆ ಹೇಳಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿ.ವಿ.ಐ.ಪಿ ಅತಿಥಿಗೃಹಕ್ಕೆ ಬಂದರು. ಈ ಸಂಧರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ ಮಾಜಿ ಪ್ರಧಾನಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು. ನಂತರ ದೇವೇಗೌಡರು ಅತಿಥಿಗೃಹದಲ್ಲಿ ವಿಶ್ರಾಂತಿ ಪಡೆದು ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಂಡರು. ಹಾಗೂ ನಾಳೆ ಆಶ್ಲೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಜೆ.ಡಿ.ಎಸ್ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವಗೌಡ, ರಾಜ್ಯವಕ್ತಾರರಾದ ಎಂ.ಬಿ ಸದಾಶಿವ, ದಯಾಕರ್ ಆಳ್ವ, ಸಂತೋಷ್ ಜಾಕೆ, ಮಾಜಿ ಜಿಲ್ಲಾ ಪಂಚಾಯತ್ ಸಯ್ಯದ್ ಮೀರಾ ಸಾಹೇಬ್, ಕೇನ್ಯ ರವೀಂದ್ರನಾಥ ಶೆಟ್ಟಿ, ಶಶಿರಾಜ್ ಶೆಟ್ಟಿ ಮಂಗಳೂರು, ಉಮೇಶ್ ಕುಮಾರ್ ಗೌಡ ಬಂಟ್ವಾಳ, ಚಂದ್ರಶೇಖರ ಗೌಡ ಕೂಡಿಂಬಾಳ, ಶಿಷ್ಟಚಾರದ ಅಧಿಕಾರಿ ಜಯರಾಮ ರಾವ್ ಹಾಗೂ ವೈದ್ಯಧಿಕಾರಿ ಮಂಜುನಾಥ್, ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಹಾಗೂ ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading