Ad Widget

ಬಾಳಿಲ ವಿದ್ಯಾಭೋದಿನಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ

ವಿದ್ಯಾಭೋದಿನೀ ಪ್ರೌಢಶಾಲೆ ಬಾಳಿಲ ಇದರ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ ಶಾಲಾ ಸಭಾಭವನದಲ್ಲಿ ಜರುಗಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಅಧ್ಯಕ್ಷರಾದಯು.ರಾಧಾಕೃಷ್ಣರಾವ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಶಾಲಾ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಭಾಗವಹಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಮುಂದಿನ ಜೀವನಕ್ಕೆ ಶುಭವನ್ನು ಹಾರೈಸಿದರು. ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ.ಎಸ್ ಮತ್ತು ಶಿಕ್ಷಕ ವೃಂದದವರು ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭವನ್ನು ಹಾರೈಸಿದರು. 8ನೇ ತರಗತಿ ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳು ಬೀಳ್ಕೊಳ್ಳುತ್ತಿರುವ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವಿದ್ಯಾರ್ಥಿನಿಯರು ವಿದಾಯ ಗೀತೆಯನ್ನು ಹಾಡಿದರು. ಈ ಬಾರಿ ರಾಜ್ಯಮಟ್ಟವನ್ನು ಪ್ರತಿನಿಧಿಸಿರುವ ಚಿರಶ್ರೀ ಮತ್ತು ವಸಂತ ಮಾಧವ ಭಟ್ ಇವರಿಗೆ ವಿಶೇಷ ಬಹುಮಾನವನ್ನು ಸಂಚಾಲಕರು ನೀಡಿದರು. 9ನೇ ತರಗತಿಯ ವಿದ್ಯಾರ್ಥಿನಿಯರಾದ ಗುರುಪ್ರಿಯ ಮತ್ತು ದೀಕ್ಷಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ದೃತಿ ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿ, ನಿಶಾ ಇವರ ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading