Ad Widget

ಸುಳ್ಯ ಸ.ಪ್ರ.ದರ್ಜೆ ಕಾಲೇಜು ಉಪನ್ಯಾಸಕ ಹೃದಯಾಘಾತದಿಂದ ಕುಸಿದುಬಿದ್ದು ಮೃತ್ಯು

ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂಜು ಅವರು ಹೃದಯಾಘಾತದಿಂದ ಕುಸಿದುಬಿದ್ದು, ಮೃತಪಟ್ಟ ಘಟನೆ ಮಾ.12ರಂದು ಮಧ್ಯಾಹ್ನ ಸಂಭವಿಸಿದೆ.
ಬೆಳಿಗ್ಗೆ ಕಾಲೇಜಿಗೆ ತೆರಳಿ ಮಧ್ಯಾಹ್ನ ತಲೆ ನೋವು ಎಂದು ಕಾಲೇಜಿನಲ್ಲಿ ಹೇಳಿ ರೂಮಿಗೆ ತೆರಳಿದ್ದ, ಮಂಜು ಅವರು ಸುಳ್ಯದ ಶ್ರೀರಾಂಪೇಟೆಯ ಬಳಿ ಮೆಡಿಕಲ್ ಒಂದಕ್ಕೆ ತೆರಳುತ್ತಿದ್ದಂತೆ ಅಲ್ಲೇ ಹಠತ್ತಾನೆ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಅಲ್ಲಿದ್ದ ಸ್ಥಳೀಯರು ಹಾಗೂ ಅಟೋರಿಕ್ಷಾ ಚಾಲಕರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದರೆನ್ನಲಾಗಿದೆ. ಅಲ್ಲಿ ವೈದ್ಯರು ಪರೀಕ್ಷಿಸಿದ ವೇಳೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿರುವುದಾಗಿ ತಿಳಿಸಿದರೆಂದು ತಿಳಿದುಬಂದಿದೆ.
ಕಳೆದ ಎರಡು ವರ್ಷಗಳಿಂದ ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜು ಅವರು ಸುಳ್ಯದಲ್ಲಿ ಬಾಡಿಗೆ ಕೊಠಡಿಯಲ್ಲಿ ಸ್ನೇಹಿತನ ಜೊತೆ ವಾಸವಾಗಿದ್ದರು.
ಮಂಜು ಅವರಿಗೆ 42 ವರ್ಷ ವಯಸ್ಸಾಗಿದ್ದು, ಪತ್ನಿ, ಮೂವರು ಮಕ್ಕಳು ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ. ಅವರ ಕುಟಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಸದ್ಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading