Ad Widget

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ಸುಳ್ಯ ತಾಲೂಕು ಘಟಕ ರಚನೆ – ಪದಾಧಿಕಾರಿಗಳ ನೇಮಕ

ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಪ್ರಾಥಮಿಕ ಶಾಲೆಯ ಎಲ್ಲಾ ವೃಂದದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಲ್ಲಾ ವೃಂದದ ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಣ ಇಲಾಖೆಯ ಕಚೇರಿಗಳ ಬೋಧಕೇತರ ಸಿಬ್ಬಂದಿಗಳು, ‘ಡಿ’ ಗ್ರೂಪ್ ನೌಕರರು ಒಳಗೊಂಡ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ(ರಿ.) ಬೆಂಗಳೂರು ಇದರ ಸುಳ್ಯ ತಾಲೂಕು ಘಟಕದ ರಚನೆ ನಡೆಯಿತು. ಘಟಕದ ಗೌರವಾಧ್ಯಕ್ಷರಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೈ.ಎಸ್ ಹರಗಿ, ಗೌರವ ಸಲಹೆಗಾರರಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶೀತಲ್ ಯು.ಕೆ, ಅಧ್ಯಕ್ಷರಾಗಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ.ಎಸ್, ಕಾರ್ಯಧ್ಯಕ್ಷರಾಗಿ ಅರಂತೋಡು ಎನ್.ಎಂ.ಪಿ.ಯು ಕಾಲೇಜಿನ ಉಪನ್ಯಾಸಕರಾದ ಮೋಹನಚಂದ್ರ ಎನ್.ಪಿ,
ಪ್ರಧಾನ ಕಾರ್ಯದರ್ಶಿಯಾಗಿ ಕಾಯರ್ತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಜಯಂತ.ಕೆ, ಖಜಾಂಜಿಯಾಗಿ ಬೆಳ್ಳಾರೆ ಕೆ.ಪಿ.ಎಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪಾವತಿ.ಪಿ, ಜಿಲ್ಲಾ ಪ್ರತಿನಿಧಿಯಾಗಿ ಬೆಳ್ಳಾರೆ ಕೆ.ಪಿ.ಎಸ್ ಪ್ರೌಢಶಾಲೆಯ ಸಹಶಿಕ್ಷಕಿ ಸಂಧ್ಯಾಕುಮಾರಿ ಬಿ.ಎಸ್ ನೇಮಕಗೊಂಡಿರುತ್ತಾರೆ.
ಹಿರಿಯ ಉಪಾಧ್ಯಕ್ಷರಾಗಿ ಎಡಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಅಬ್ದುಲ್ ಖಾದರ್, ಉಪಾಧ್ಯಕ್ಷರಾಗಿ ಬೆಳ್ಳಾರೆ ಕೆ.ಪಿ.ಎಸ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಾಯಿಲಪ್ಪ, ಮುಡ್ನೂರು ಮರ್ಕಂಜದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ದೇವರಾಜ್, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದ್ವಿತೀಯ ದರ್ಜೆ ಸಹಾಯಕರಾದ ವಿಜೇತ್ ಎಂ.ಸಿ, ಜಂಟಿ ಕಾರ್ಯದರ್ಶಿಯಾಗಿ ಪಾಂಡಿಗದ್ದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಯಶೋಧರ.ಕೆ, ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶೃತಿ, ಸಂಘಟನಾ ಕಾರ್ಯದರ್ಶಿಯಾಗಿ ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನ ಸಹಶಿಕ್ಷಕಿ ಪೂರ್ಣಿಮಾ ಎಂ.ಎಂ, ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಸುಬ್ರಹ್ಮಣ್ಯ ಕೆ.ಎನ್, ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ದಯಾನಂದ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಎಣ್ಮೂರು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕ ಲಿಂಗಪ್ಪ ಬೆಳ್ಳಾರೆ, ಕ್ರೀಡಾ ಕಾರ್ಯದರ್ಶಿಯಾಗಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹರಿಪ್ರಸಾದ್ ರೈ.ಜಿ, ನಿರ್ದೇಶಕರಾಗಿ ಚೊಕ್ಕಾಡಿ ಕುಕ್ಕುಜಡ್ಕ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಸಂಕೀರ್ಣ ಚೊಕ್ಕಾಡಿ, ಗುತ್ತಿಗಾರಿನ ಪಿ.ಎಂ.ಶ್ರೀ ಶಾಲೆಯ ಸಹ ಶಿಕ್ಷಕರಾದ ಕುಶಾಲಪ್ಪ ಟಿ, ಪಡ್ಪಿನಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸರೋಜಿನಿ.ಕೆ, ಮರ್ಕಂಜದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗಣೇಶ್, ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಪ್ರೌಢಶಾಲೆಯ ಸಹಶಿಕ್ಷಕ ಸುರೇಶ್ ಪಿ.ಎನ್ ಇವರು ಆಯ್ಕೆಯಾಗಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading