Ad Widget

ಕು.ಗೋಷಿತಾ ಕುಳ್ಳಂಪಾಡಿ ನವೋದಯ ವಿದ್ಯಾಲಯಕ್ಕೆ ಆಯ್ಕೆ

ಹಾಲೆಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು.ಗೋಷಿತಾ ಕುಳ್ಳಂಪಾಡಿ ಅವರು ಮುಡಿಪು ನವೋದಯ ವಸತಿ ಶಾಲೆಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಪ್ರಥಮ ಸುತ್ತಿನಲ್ಲಿ ಆಯ್ಕೆಯಾಗಿರುತ್ತಾರೆ.
ಕುಳ್ಳಂಪಾಡಿ ಗೋಪಾಲಕೃಷ್ಣ ಹಾಗೂ ಶ್ರೀಮತಿ ಧನ್ಯಾ ದಂಪತಿಗಳ ಪುತ್ರಿಯಾದ ಇವರು ಗುತ್ತಿಗಾರು ಗ್ರಾಮ ಪಂಚಾಯತ್ ಅರಿವು ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದ ಸಹಭಾಗಿತ್ವದ ಎಂಟನೇ ವರ್ಷದ ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿದ್ದು, ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದ ಶ್ರೀಮತಿ ದಿವ್ಯಾ ಸುಜನ್ ಗುಡ್ಡೆಮನೆ ಇವರು ತರಬೇತಿ ನೀಡಿರುತ್ತಾರೆ. ಈ ತರಬೇತಿ ಸಂಸ್ಥೆಯಿಂದ ಈಗಾಗಲೇ ಹಲವಾರು ವಿದ್ಯಾರ್ಥಿಗಳು ತರಬೇತಿ ಪಡೆದುಕೊಂಡು ಮುಡಿಪು ನವೋದಯ ವಸತಿ ಶಾಲೆಗೆ ಆಯ್ಕೆಗೊಂಡು ವಿದ್ಯಾಬ್ಯಾಸ ಪಡೆಯುತ್ತಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading