ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಏಪ್ರಿಲ್ 10 ರಿಂದ 12ರ ತನಕ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಸುಳ್ಯದ ಯುವ ಉದ್ಯಮಿ ರಾಜೇಶ್ ಶೆಟ್ಟಿ ಮೇನಾಲ, ಅಜ್ಜಾವರ ಗ್ರಾ.ಪಂ ಸದಸ್ಯರಾದ ಪ್ರಸಾದ್ ರೈ ಮೇನಾಲ, ಅಜ್ಜಾವರ ಚೈತ್ರಾ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ ಶಶ್ಮೀ ಭಟ್, ಅಜ್ಜಾವರ ದುರ್ಗಾಪರಮೇಶ್ವರಿ ಭಜನಾ ಮಂದಿರ ಕಾರ್ಯದರ್ಶಿ ಯತೀಶ್, ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಅಧ್ಯಕ್ಷರಾದ ನಾಚಿಮುತ್ತು, ಹಿರಿಯರಾದ ದಯಾಳ್, ದೇವಸ್ಥಾನದ ಅರ್ಚಕರಾದ ಯೋಗರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದಯಾಳನ್ ಸ್ವಾಗತಿಸಿ, ವಿನೋದ್ ಧನ್ಯವಾದ ಸಮರ್ಪಿಸಿದರು. ರಮೇಶ್ ಮೇದಿನಡ್ಕ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ಊರ ಭಕ್ತಾದಿಗಳು, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading