ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮೂರು ಕೆ.ಎಫ್.ಡಿ.ಸಿ. ಕಾರ್ಮಿಕ ಸಂಘಟನೆಗಳಿಂದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ – ಪ್ರತಿಭಟನೆಯಿಂದ ಹಿಂದೆ ಸರಿದ ಎರಡು ಕಾರ್ಮಿಕ ಸಂಘಟನೆಗಳು

. . . . . . . . .

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ.) ಕಾರ್ಮಿಕ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎ.1ರಿಂದ ಸುಳ್ಯದ ಕೆ.ಎಫ್.ಡಿ.ಸಿ. ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಮತ್ತು ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು. ಆದರೆ ಈ ಧರಣಿ ಸತ್ಯಾಗ್ರಹ ಮತ್ತು ಪ್ರತಿಭಟನೆಯಿಂದ ಈಗ ಎರಡು ಸಂಘಟನೆಗಳು ಹಿಂದಕ್ಕೆ ಸರಿದಿದ್ದು, ಉಳಿದ ಮೂರು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

. . . . . . .

ಕೆ.ಎಫ್.ಡಿ.ಸಿ. ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಎ.1ರಿಂದ ಸುಳ್ಯದಲ್ಲಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದು, ಈ ಕುರಿತಂತೆ ಕಾರ್ಮಿಕ ಸಂಘಟನರಗಳು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು.
ಆದರೆ ಆ ಬಳಿಕ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರು ಕಾರ್ಮಿಕ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ, ಸರ್ಕಾರದ ಮಟ್ಟದಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಮೇರೆಗೆ ಇದೀಗ ಕರ್ನಾಟಕ ಫ್ಲಾ.ಟೇಷನ್ ಮತ್ತು ಇಂಡಸ್ಡ್ರೀಯಲ್ ಟ್ರೇಡ್ ಯೂನಿಯನ್ ಹಾಗೂ ತೋಟ ತೊಳಿಲಾಲರ್ ಸಂಘಟನೆಗಳು ತಮ್ಮ ಧರಣಿ ಸತ್ಯಾಗ್ರಹ ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
ಆದರೆ ಉಳಿದ ಕಾರ್ಮಿಕ ಸಂಘಟನೆಗಳಾದ ಕರ್ನಾಟಕ ತೋಟ ಮಜ್ದೂರ್ ಸಂಘ, ಜನರಲ್ ಎಂಪ್ಲಾಯಿಸ್ ಯೂನಿಯನ್ ಹಾಗೂ ಕೆ.ಎಫ್.ಡಿ.ಸಿ. ಲೇಬರಲ್ ಯೂನಿಯನ್ ಸಂಘಟನೆಗಳು ಕಾರ್ಮಿಕರ ಪರವಾಗಿ ನಿಂತಿದ್ದು, ಸುಳ್ಯದ ಕೆ.ಎಫ್‌.ಡಿ.ಸಿ. ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಮತ್ತು ಪ್ರತಿಭಟನೆ ನಡೆಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading