Ad Widget

ಅಡುಗೆ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಬಾಕಿ ಇರುವ ಗೌರವ ಧನ ನೀಡುವಂತೆ ಆಗ್ರಹಿಸಿ ಎಸ್ಡಿಪಿಐ ತಹಶೀಲ್ದಾರ್ ಗೆ ಮನವಿ

ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಕ್ಷಣ ಐದು ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಸುಳ್ಯ ವಿಧಾನ ಸಭಾ ಸಮಿತಿ ವತಿಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಕಳೆದ ಐದು ತಿಂಗಳಿಂದ ಗೌರವ ಧನ ನೀಡದೆ ಇರುವುದು ಅತ್ಯಂತ ಖೇದಕರ. ಈಗಾಗಲೇ ಲಾಕ್ ಡೌನ್ ನಿಂದಾಗಿ ಇತರೆ ಬೇರೆ ಕೆಲಸ ಸಹ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಸಹ ಗೌರವ ಧನ ನೀಡದೆ ಇರುವುದರಿಂದ ಅವರ ಜೀವನ ಅಸ್ತವ್ಯಸ್ತವಾಗಿದೆ. ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ಡಿ. ಗ್ರೂಪ್ ನೌಕರರ ಸಂಖ್ಯೆ ಕಡಿಮೆ ಇದ್ದು, ಕೆಲವು ಶಾಲೆಗಳಲ್ಲಿ ಡಿ. ಗ್ರೂಪ್ ನೌಕರರು ಇಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಮ್ಮ ಅಡುಗೆ ಕೆಲಸದ ಜೊತೆ ಜೊತೆಯಲ್ಲೇ ಶಾಲೆಯ ಸ್ವಚ್ಛತೆ ಮತ್ತು ಇತರೆ ಕೆಲಸ ಸಹ ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಹೀಗೆ ಶಾಲೆಗಳಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಅವರ ಸೇವೆಗೆ ತಕ್ಕ ಪ್ರತಿಫಲ ನೀಡ ಬೇಕಾಗಿರುವುದರಿಂದ ಈ ಕೂಡಲೇ ಕಳೆದ ಐದು ತಿಂಗಳ ಗೌರವ ಧನವನ್ನು ಏಕಕಾಲಕ್ಕೆ ಪಾವತಿಸಿಸ ಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ. ಈ ವಿಚಾರವಾಗಿ ಸುಳ್ಯ ತಹಶೀಲ್ದಾರ್ ಮುಖಾಂತರ ಮಾನ್ಯ ಮುಖ್ಯಮಂತ್ರಿ ಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಸಭಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ಕಲಾಂ,ಕಾರ್ಯದರ್ಶಿ ಮುಸ್ತಾಫ ಎಂ.ಕೆ. ಜಾಲ್ಸೂರ್ ವಲಯ ಅಧ್ಯಕ್ಷ ಅಭಿಧ್ ಪೈಚಾರ್, ರಿಜ್ವಾನ್ ಬೋರುಗುಡ್ಡೆ,ಕರಿಮ್ ಬಿ.ಎಸ್. ಪೈಚಾರ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading