ಗುತ್ತಿಗಾರು : ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಕಲಾ ಶಿಬಿರ

ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಅರೆ ಭಾಷೆ ಸಂಸ್ಕೃತಿ ಮತ್ತು ಕಲಾ ಶಿಬಿರವನ್ನು ಏರ್ಪಡಿಸಲಾಯಿತು. 
ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ ಇವರು ಉದ್ಘಾಟಿಸಿ “ಪ್ರಾದೇಶಿಕ ಭಾಷೆಗಳನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ಭಾಷೆಯನ್ನು ಮಾತನಾಡುವವರಿಗೆ ಇರಬೇಕು. ಈ ಪ್ರದೇಶದಲ್ಲಿರುವ ಅರೆ ಭಾಷೆಯನ್ನು ಪೋಷಕರು ತಮ್ಮ ಮಕ್ಕಳೊಂದಿಗೆ ಮಾತನಾಡಿ ಅದರ ಅಸ್ಮಿತೆಯನ್ನು ಉಳಿಸಿಕೊಳ್ಳಬೇಕೆಂದು” ಕರೆ ಇತ್ತರು. 
ಸಮಾರಂಭದ ಅಧ್ಯಕ್ಷತೆಯನ್ನು ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ವಹಿಸಿ “ಶಾಲಾ-ಕಾಲೇಜುಗಳಲ್ಲಿ ಅರೆಭಾಷೆಯನ್ನು ಉಳಿಸಿ ಬೆಳೆಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಅಂಬೆಕಲ್ಲು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಮಾಜಿ ಸದಸ್ಯರಾದ ಪರಶುರಾಮ ಚಿಲ್ತಡ್ಕ, ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ.ಪಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಿಶ್ವನಾಥ ಸಾಲ್ತಾಡಿ, ಬಾಬು ಗೌಡ ಅಚ್ರಪಾಡಿ, ಅಕಾಡೆಮಿ ಸದಸ್ಯರಾದ ಕಾರ್ಯಪ್ಪ ಪಿ.ಎಸ್, ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಸಾವಿತ್ರಿ ಇವರು ಉಪಸ್ಥಿತರಿದ್ದರು. 
ಚಂದ್ರಶೇಖರ ಪೆರಾಲು ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಇವರು ಧನ್ಯವಾದಗೈದರು. ರಂಜಿತ್ ಅಂಬೆಕಲ್ಲು ಕಾರ್ಯಕ್ರಮವನ್ನು ನಿರೂಪಿಸಿದರು. 
ವಿವಿಧ ಕಾರ್ಯಕ್ರಮಗಳಲ್ಲಿ ಕೆ.ಆರ್ ಗೋಪಾಲಕೃಷ್ಣ, ಪಟ್ಟಾಭಿರಾಮ ಸುಳ್ಯ, ವಿನೋದ್ ಮೂಡಗದ್ದೆ, ಶ್ರೀಮತಿ ಮಮತಾ ರವೀಶ್ ಪಡ್ಡಂಬೈಲ್, ಯಶವಂತ ಕುಡೆಕಲ್ಲು, ಬಾಬುಗೌಡ ಅಚ್ರಪಾಡಿ, ಸುಭಾಷ್ ಪಂಜ, ಲೋಕೇಶ್ ಪೀರನ ಮನೆ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.‌
ಸಮಾರೋಪ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೇಶವ ಗೌಡ ಕಾಂತಿಲ, ಮತ್ತು ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ ಮತ್ತು ಕುಶಾಲಪ್ಪ ತುಂಬತ್ತಾಜೆ ಇವರು ಉಪಸ್ಥಿತರಿದ್ದರು. 
ವಿಶ್ರಾಂತ ಉಪನ್ಯಾಸಕರಾದ ಲಯನ್ ವೆಂಕಪ್ಪ ಕೇನಾಜೆ ಇವರು ಸಮಾರೋಪ ಮಾತುಗಳನ್ನಾಡಿ “ಶಾಲಾ ಕಾಲೇಜುಗಳಲ್ಲಿ ಭಾಷಾ ಅಭಿಮಾನ ಮೂಡಿಸುವ ಕಾರ್ಯಕ್ರಮ ಅಭಿನಂದನೀಯ” ಎಂದರು.
ಸಭೆಯ ಅಧ್ಯಕ್ಷತೆಯನ್ನು ಅರೆಭಾಷೆ ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೆರಾಲು ಇವರು ವಹಿಸಿದ್ದರು. 
ವೇದಿಕೆಯಲ್ಲಿ ಶಿಬಿರದ ಸಂಯೋಜಕರಾದ ರಂಜಿತ್ ಅಂಬೆಕಲ್ಲು ಶ್ರೀಮತಿ ಶೃತಿ ಟಿ.ಸಿ ಮತ್ತು ಕುಮಾರಿ ಕಾವ್ಯ ಬಳ್ಳಡ್ಕ ಇವರು ಉಪಸ್ಥಿತರಿದ್ದರು. 
ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಎಲ್ಲರನ್ನು ಸ್ವಾಗತಿಸಿ ರಂಜಿತ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading