ಎ.21 – 22: ಸುಳ್ಯದ ಶ್ರೀ ಗುರುರಾಘವೇಂದ್ರ ಮಠದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ – ಈ ಬಾರಿ ಡಾ. ಕೆ.ವಿ ಚಿದಾನಂದ ಅವರಿಗೆ “ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿ” ಪ್ರದಾನ ; ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪತ್ರಿಕಾಗೋಷ್ಠಿ

ಸುಳ್ಯದ ಶ್ರೀ ಗುರುರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕೋತ್ಸವವು ಎ.21 ಮತ್ತು 22ರಂದು ನಡೆಯಲಿದ್ದು, ಈ ಬಾರಿ “ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿ”ಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರಿಗೆ ಪ್ರದಾನ ಮಾಡಲಾಗುವುದು. ಎಂದು ಶ್ರೀ ಗುರುರಾಘವೇಂದ್ರ ಮಠದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

. . . . . . . . .

ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಎ.14ರಂದು ಪತ್ರಿಕಾಗೋಷ್ಠಿ ನಡೆಸಿದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು.

. . . . . . .

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀಕೃಷ್ಣ ಸೋಮಯಾಗಿ ಅವರು “ಶ್ರೀ ಗುರುರಾಯರ ಮಠದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀಹರಿ ಎಳಚಿತ್ತಾಯರ ಮಾರ್ಗದರ್ಶನದಲ್ಲಿ ಎರಡು ದಿನಗಳ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ನಡೆಯಲಿದ್ದು, ಎ.21ರಂದು ಪೂರ್ವಾಹ್ನ ಮಹಾಗಣಪತಿ ಹೋಮ, ಸಂಜೆ ಪಲ್ಲಕ್ಕಿಯಲ್ಲಿ ರಾಯರ ಪಟ್ಟಣ ಸವಾರಿಯು ನಡೆಯಲಿದೆ” ಎಂದು ಹೇಳಿದರು. “ಎ.22ರಂದು ಪೂರ್ವಾಹ್ನ ಪಂಚವಿಂಶತಿ ಕಲಶ ಪೂಜೆ, ಕಲಶಾಭಿಷೇಕ, ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಶ್ರೀ ರಾಮ ತಾರಕ ಮಂತ್ರ ಹೋಮ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿನಗರದ ಶ್ರೀ ದೀಪಾಂಜಲಿ ಭಜನಾ ಮಂಡಳಿಯವರಿಂದ ಭಜನೆ ನಡೆಯಲಿದೆ. ಮಧ್ಯಾಹ್ನ ಶ್ರೀ ಗುರುರಾಘವೇಂದ್ರ ಸ್ವಾಮಿಗೆ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಆ ದಿನ ಸಂಜೆ ಆಶ್ಲೇಷ ಬಲಿ ಪೂಜೆ, ರಾತ್ರಿ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ” ಎಂದು ಶ್ರೀಕೃಷ್ಣ ಸೋಮಯಾಗಿ ಅವರು ಹೇಳಿದರು. “ಎ.22ರಂದು ಮಧ್ಯಾಹ್ನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ದಿವ್ಯ ಉಪಸ್ಥಿತಿ ಇರಲಿದ್ದು, ಈ ಸಂದರ್ಭದಲ್ಲಿ ಈ ಬಾರಿಯ ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿಯನ್ನು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರಿಗೆ ಪ್ರದಾನ ಮಾಡಲಾಗುವುದು” ಎಂದು ಅವರು ಹೇಳಿದರು. “ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸುಳ್ಯದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ಅವರು ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಅಜ್ಜಾವರದ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವರಾವ್ ಬಯಂಬು, ಸುಳ್ಯದ ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ, ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಡಾ. ವಿಷ್ಣುಮೂರ್ತಿ ಆಚಾರ್ ಸುಳ್ಯ ಅವರು ಉಪಸ್ಥಿತರಿರಲಿದ್ದಾರೆ” ಎಂದು ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀಕೃಷ್ಣ ಸೋಮಯಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಗಳಾದ ರಾಮ್ ಕುಮಾರ್ ಹೆಬ್ಬಾರ್, ರಮೇಶ್, ಶಿವಳ್ಳಿ ಸಂಪನ್ನದ ಉಪಾಧ್ಯಕ್ಷ ಗಂಗಾಧರ ಮಟ್ಟಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading