ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಗುತ್ತಿಗಾರಿನಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಕಮಿಲ-ಬಳ್ಪ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, “ಎಲೆಕ್ಷನ್ ಮತ್ತು ಕಲೆಕ್ಷನ್ ನವರಿಗೆ ಕಡ್ಡಾಯವಾಗಿ ಒಳಗೆ ಪ್ರವೇಶವಿಲ್ಲ. ಕಚ್ಚುವ ನಾಯಿಗಳಿವೆ ಜಾಗ್ರತೆ!” ಎಂದು ಈ ಬ್ಯಾನರ್ ನಲ್ಲಿ ಬರೆಯಲಾಗಿದೆ. ಗುತ್ತಿಗಾರಿನ ಲಕ್ಷ್ಮಣ ದೇವಶ್ಯ ಎಂಬುವವರು ತಮ್ಮ ಮನೆಯ ಸಮೀಪ ಈ ಬ್ಯಾನರ್ ಅನ್ನು ಅಳವಡಿಸಿದ್ದು, “ದೇಶದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಊರೂರುಗಳಲ್ಲಿ ನೆಲೆಸುತ್ತಿದ್ದು, ಅವರುಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತ್ ಹಾಗೂ ಜನಪ್ರತಿನಿಧಿಗಳ ಬಳಿ ಮನವಿ ಮಾಡಿಕೊಂಡರೂ ಸೂಕ್ತ ಸ್ಪಂದನೆ ದೊರೆಯದೇ ಇರುವ ಕಾರಣ ಈ ರೀತಿಯ ಬ್ಯಾನರ್ ಅಳವಡಿಕೆ ಮಾಡಿದ್ದೇನೆ” ಎಂದು ಲಕ್ಷ್ಮಣ ದೇವಶ್ಯ ಅವರು ತಿಳಿಸಿದ್ದಾರೆ. ಕಮಿಲ-ಬಳ್ಪ ರಸ್ತೆ ಬದಿಯಲ್ಲಿ ಕಾಣಸಿಗುತ್ತಿರುವ ಈ ಬ್ಯಾನರ್ ಅನ್ನು ಗುತ್ತಿಗಾರಿನ ನಿರಂತ್ ದೇವಶ್ಯ ಎಂಬುವವರು ವಿಡಿಯೋ ಮಾಡಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading