ಮಂಡೆಕೋಲು : ವಿಶ್ವದಾಖಲೆ ನಿರ್ಮಿಸಿದ ಅಭಿಷೇಕ್ ಗೆ ಏ.20 ರಂದು ಹುಟ್ಟೂರ ಸನ್ಮಾನ

ನಿರಂತರ 24 ಘಂಟೆಗಳ ಕಾಲ ಕೂಚುಪುಡಿ ನೃತ್ಯ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಅಭಿಷೇಕ್ ಕಣಿಮರಡ್ಕ
ಇವರಿಗೆ ಹುಟ್ಟೂರ ಸನ್ಮಾನ ಸಮಾರಂಭ ಏ.20 ರಂದು ಮಂಡೆಕೋಲಿನ ಅಮೃತ ಸಹಕಾರ ಸದನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಭಿನಂದಿಸಲಿದ್ದು, ಸಂಸದರಾದ ಕ್ಯಾ। ಬ್ರಿಜೇಶ್ ಚೌಟ ಅಭಿಮದನಾ ನುಡಿಗಳನ್ನಾಡಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಐ ಕ್ಯೂ ಏ ಸಿ ಸಂಚಾಲಕಿ ಡಾ.ಮಮತಾ ಕೆ. ಆಗಮಿಸಲಿದ್ದಾರೆ ಎಂದು ಅಭಿನಂದನಾ ಸಮಿತಿ ಸಂಚಾಲಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading