ಅಜ್ಜನಗದ್ದೆ : ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ

ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ(ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್(ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.
ಶಿಬಿರವು ಏಪ್ರಿಲ್ 11ರಂದು ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ, ಸಾಂಸ್ಕೃತಿಕ ಚಟುವಟಿಕೆಗಳು ಸೇರಿದಂತೆ ಹಲವಾರು ತರಬೇತಿಗಳನ್ನು ನೀಡಿದರು. ಶಿಬಿರವನ್ನು ಮಕ್ಕಳಿಗಾಗಿ ಉಚಿತವಾಗಿ ಆಯೋಜಿಸಲಾಗಿದ್ದು, ಊಟ ಮತ್ತು ಉಪಹಾರ ವ್ಯವಸ್ಥೆಯನ್ನು ಸಹ ಹಲವಾರು ದಾನಿಗಳ ಸಹಕಾರದಿಂದ ಒದಗಿಸಲಾಯಿತು.
ಶಿಬಿರದ ಸಮಾರೋಪ ಸಮಾರಂಭವು ಏಪ್ರಿಲ್ 15ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶ್ರೀ ಸುಭಾಷ್ ಚಂದ್ರ ಕಳಂಜ ಹಾಗೂ ಯುವಜನ ಸಂಯುಕ್ತ ಮಂಡಳಿಯ ಸಾಂಸ್ಕೃತಿಕ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ ಅವರ ಉಪಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಈಶ್ವರ ಕಾಯರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಯುವಕ-ಯುವತಿ ಮಂಡಳಿಗಳ ಹಾಗೂ ಸಮರ್ಪಣಾ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಸದಸ್ಯರು ಶಿಬಿರದಲ್ಲಿ ಪಾಲ್ಗೊಂಡು ಮಕ್ಕಳನ್ನು ಉತ್ತೇಜಿಸಿದರು. ಶಿಬಿರದ ಅಂತ್ಯದಲ್ಲಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಸೊಬಗು ತಂದರು. ಈ ಶಿಬಿರವು ಮಕ್ಕಳ ಸಮಗ್ರ ಬೆಳವಣಿಗೆಗೆ ಪೂರಕವಾಗಿದ್ದು, ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading