ಮೆಸ್ಕಾಂ ಸಲಹಾ ಸಮಿತಿ ಸದಸ್ಯರಿಂದ ಧರಣಿ – ಜನ ಸಂಪರ್ಕ ಸಭೆ ರದ್ದು – ಸಾರ್ವಜನಿಕರಿಂದ ಮನವಿ ಸ್ವೀಕಾರ

. . . . . . . . .

ಮೆಸ್ಕಾಂ ಸಲಹಾ ಸಮಿತಿ ಸದಸ್ಯರಿಗೆ ಮಾಹಿತಿ ನೀಡದೇ ಜನಸಂಪರ್ಕ ಸಭೆ ನಡೆಸಿರುವುದಕ್ಕೆ ಆಕ್ಷೇಪ ಬಂದು ಸಭೆ ರದ್ದಾದ ಘಟನೆ ಏ.28 ರಂದು ನಡೆದಿದೆ.‌

. . . . . . .

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗದ ಜನ ಸಂಪರ್ಕ ಸಭೆ ನಿಗದಿಯಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಗ್ಯಾರಂಟಿ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಸಲಹಾ ಸಮಿತಿ ಸದಸ್ಯರು ಧರಣಿ ನಡೆಸಿ, ಚರ್ಚೆ ನಡೆದು ಸಭೆ ಮುಂದೂಡಲು ಆಗ್ರಹಿಸಿದ ಪರಿಣಾಮ ಅಧಿಕಾರಿಗಳು ಸಭೆಯನ್ನು ಮುಂದೂಡಿದರು.

ಸಭೆ ಇರುವ ಬಗ್ಗೆ ಪ್ರಚಾರ ಮಾಡದಿರುವ ಬಗ್ಗೆ, ಅಧಿಕಾರಿಗಳು ಸಭೆಗೆ ಬಾರದಿರುವುದು, ಅಧಿಕಾರಿಗಳು ಫೋನ್ ರಿಸೀವ್ ಮಾಡದಿರುವ ಕುರಿತು ಚರ್ಚೆ ನಡೆಯಿತು. ಸಭೆಗೆ ಬಂದ ಸಾರ್ವಜನಿಕರಿಂದ ಮನವಿ ಸ್ವೀಕರಿಸಲಾಯಿತು. ಸಲಹಾ ಸಮಿತಿ ಸಭೆಯನ್ನು ಮೇ.10 ರಂದು ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಹಾಗೂ ಶೀಘ್ರವಾಗಿ ಜನ ಸಂಪರ್ಕ ಸಭೆ ನಡೆಸಲು ದಿನ ನಿಗದಿ ಮಾಡುವುದಾಗಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ತಿಳಿಸಿದರು.

ಪುತ್ತೂರು ವಿಭಾಗ ಕಾರ್ಯನಿರ್ವಾಹಕ ಇಂಜಿನಿಯ‌ರ್ ರಾಮಚಂದ್ರ, ಸುಬ್ರಹ್ಮಣ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಸಫಲ್ಯ, ಸುಳ್ಯ ಸಹಾಯಕ ಇಂಜಿನಿಯರ್ ಸುಪ್ರೀತ್ ವೇದಿಕೆಯಲ್ಲಿದ್ದರು. ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಸಂಪಾಜೆ ಗ್ರಾ.ಪಂ‌. ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್, ಬ್ಕಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ನ.ಪಂ.ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸಲಹಾ ಸಮಿತಿ ಸದಸ್ಯರಾದ ಜುನೈದ್ ಅಡ್ಕಾರ್, ಸತ್ಯಕುಮಾರ್ ಆಡಿಂಜ, ಧರ್ಮಪಾಲ ಕೊಯಿಂಗಾಜೆ, ರಾಧಾಕೃಷ್ಣ ಪರಿವಾರಕಾನ, ದಿನೇಶ್ ಸರಸ್ವತಿಮಹಲ್, ಆರ್.ಬಿ‌. ಬಶೀರ್ ಮತ್ತಿತರರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading