ಮೇ 08 ರಂದು ಪಿಯುಸಿ ಅರ್ಜಿ ಸ್ವೀಕಾರಕ್ಕೆ ಕೊನೆಯ ದಿನ

ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ)ಯ ಸುತ್ತೋಲೆ ಪ್ರಕಾರ ಪ್ರಥಮ ಪಿಯುಸಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಮೆ.08 ಕೊನೆ ದಿನಾಂಕವಾಗಿದೆ. ಮೆ.09ರಂದು ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮೇ.14ರಂದು ವಿದ್ಯಾರ್ಥಿಗಳ ಪ್ರಥಮ ಪಟ್ಟಿ ಪ್ರಕಟಿಸಲಾಗುವುದು ಎಂದು ದ.ಕ ಜಿಲ್ಲಾ ಅನುದಾನಿತ ಉಪನ್ಯಾಸಕರ ಸಂಘದ ಅಧ್ಯಕ್ಷ ಮತ್ತು ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್ ತಿಳಿಸಿದ್ದಾರೆ. ಮೇ.18ರಂದು ಪ್ರಥಮ ಪಟ್ಟಿಯಲ್ಲಿ ಪ್ರಕಟಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕವಾಗಿದೆ. ಮೇ.19 ರಂದು ದ್ವಿತೀಯ ಪಟ್ಟಿ ಪ್ರಕಟ, ಮೇ.21 ರಂದು ದ್ವಿತೀಯ ಪಟ್ಟಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಕೊನೆಯ ದಿನ, ಮೇ.22 ರಂದು ತೃತೀಯ ಪಟ್ಟಿ ಪ್ರಕಟ, ಮೇ.23 ರಂದು ತೃತೀಯ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಕೊನೆ ದಿನಾಂಕವಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading