ಸುಬ್ರಹ್ಮಣ್ಯ ಮಠದಲ್ಲಿ ನರಸಿಂಹ ಜಯಂತಿ ಅಂಗವಾಗಿ ಭವ್ಯ ವ್ಯಾಸ ಪೂಜೆ ಹಾಗೂ ಮಹಾರಥೋತ್ಸವ

ಸುಬ್ರಹ್ಮಣ್ಯ: ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನರಸಿಂಹ ಜಯಂತಿ ಅಂಗವಾಗಿ ಮೇ.01 ರಂದು ಸುಬ್ರಹ್ಮಣ್ಯ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಪೂರ್ವಾಹ್ನ ವ್ಯಾಸ ಪೂರ್ಣಿಮ ಹಾಗೂ ವ್ಯಾಸ ಪೂಜೆ ಕಾರ್ಯಕ್ರಮಗಳು ವಿಧಿವಿಧಾನಗಳಿಂದ ನಡೆಯಿತು. ಬಳಿಕ ಮಹಾರಥೋತ್ಸವ ಭಕ್ತರ ನಡುವೆ ಭವ್ಯವಾಗಿ ನೆರವೇರಿತು. ಇದರೊಂದಿಗೆ ವಸಂತ ಪೂಜೆ ಕೂಡ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪುಣ್ಯ ಪಡೆದರು. ಶ್ರೀಪಾದರ ಮಾರ್ಗದರ್ಶನದಲ್ಲಿ ನಡೆದ ಈ ಉತ್ಸವವು ಧಾರ್ಮಿಕ ಶ್ರದ್ಧೆ ಹಾಗೂ ಸಂಪ್ರದಾಯದ ಮಹತ್ವವನ್ನು ಮತ್ತೊಮ್ಮೆ ತೋರಿಸಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading