ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಪ್ರಾರ್ಥನೆ

ಸುಬ್ರಹ್ಮಣ್ಯ ಮೇ 11 : ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ದೈವವಾದ ಶ್ರೀ ಚಾಮುಂಡಿ ಸ್ಥಾನದ ನವೀಕರಣ ಹಾಗೂ ವಿವಿಧ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸುವ ಸಲುವಾಗಿ ಇಂದು ಪಂಜದ ಸೀಮೆ ದೇವಸ್ಥಾನದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಶ್ರೀ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸಿ ಕ್ಷೇತ್ರದಲ್ಲಿ ನಡೆಯುವ ಎಲ್ಲಾ ಕೆಲಸ ಕಾರ್ಯಗಳು ಸಾಂಗವಾಗಿ ನೆರವೇರಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಪಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರು, ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಪದ್ಮನಾಭ ಹಾಗೂ ಬ್ರಹ್ಮಕಲ ಶೊತ್ಸವ ಸಮಿತಿಯ ಅಧ್ಯಕ್ಷರಾದ ವಿನ್ಯಾಸ್ ಕೊಚ್ಚಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading