ಸುಳ್ಯ : ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ ಸುಳ್ಯ ವಲಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಕಾರ್ಯಕ್ರಮವನ್ನು ನಡೆಸಿದ್ದು, ಸದ್ರಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ದಿನಾಂಕ ಮೇ.11ರಂದು ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಚೆನ್ನಕೇಶವ ದೇವಸ್ಥಾನದ ಆಡಳಿತ ಅನುವಂಶಿಕ ಮೊಕ್ತೇಸರರಾದ ಡಾ.ಹರಪ್ರಸಾದ್‌ ತುದಿಯಡ್ಕರವರು ಮಾತನಾಡಿದರು. “ಅಧುನಿಕ ಕಾಲದಲ್ಲಿ ಎಲ್ಲರೂ ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗಿ ಹೆತ್ತವರು ತಮ್ಮ ಮಕ್ಕಳನ್ನು ಆಂಗ್ಲಮಾಧ್ಯಮ ಶಾಲೆಗೆ ಕಳುಹಿಸುತ್ತಿದ್ದರೂ ಭಜನೆಯ ಮೇಲೆ ಒಲವು ತೋರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಭಜನೆ ಸೇರಿದಂತೆ ನಮ್ಮ ಹಿರಿಯರಿಂದ ಬಂದಿರುವ ಸಂಸ್ಕೃತಿಗಳನ್ನು ಉಳಿಸಿ ಬೆಳೆಸಲು ಮಕ್ಕಳು ಹಾಗೂ ಹೆತ್ತವರು ಶ್ರಮಿಸಬೇಕು. ಭಜನಾ ಪರಿಷತ್ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಇಂತಹ ಶಿಬಿರ ನಡೆಯುತ್ತಿರುವುದು ಶ್ರೇಷ್ಠ ಕೆಲಸ” ಎಂದು ಅವರು ಹೇಳಿದರು. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಸುಳ್ಯ ವಲಯದ ಅಧ್ಯಕ್ಷೆ ಸವಿತಾ ಸಂದೇಶ್ ಅಧ್ಯಕ್ಷತೆ ವಹಿಸಿದ್ದರು.
ಮೊದಲನೆಯದಾಗಿ “ಮಾತಾ-ಪಿತ”ರ ಪಾದ ಪೂಜೆ ಕಾರ್ಯಕ್ರಮವನ್ನು ಶ್ರೀಮತಿ ಶ್ರೀ ದೇವಿ ನಾಗರಾಜ್‌ ಭಟ್‌ ರವರು ನೆರವೇರಿಸಿದರು. ನಂತರ ತರಬೇತಿ ಪಡೆದ ಮಕ್ಕಳಿಂದ ಭಜನಾ ಪ್ರಾತ್ಯಕ್ಷಿತೆಯನ್ನು ನಡೆಸಲಾಯಿತು. ತರಬೇತಿ ಪಡೆದ ಮಕ್ಕಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಸದ್ರಿ ಕಾರ್ಯಕ್ರಮದಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎನ್.ಎ ರಾಮಚಂದ್ರ, ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ವೆಂಕಪ್ಪ ಗೌಡ, ಉದ್ಯಮಿಗಳಾದ ನಾರಾಯಣ ಕೇಕಡ್ಕ, ಅಶೋಕ ಪ್ರಭು, ಜಗದೀಶ ಸರಳಿಕುಂಜ, ಬಾಲಚಂದ್ರ ಹರ್ಲಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯೋಜನಾಧಿಕಾರಿಗಳಾದ ಮಾದವ ಗೌಡರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading