ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಅಲ್ಪ ಬದಲಾವಣೆ ; ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಮದ್ಯಾಹ್ನ ಒಂದು ಗಂಟೆಗಳ ಕಾಲವಷ್ಟೇ ದೇವರ ದರ್ಶನ ಸ್ಥಗಿತ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಅಲ್ಪ ಬದಲಾವಣೆಯಾಗಿದ್ದು, ಈ ಹಿಂದೆ ಮದ್ಯಾಹ್ನ 1:30 ರಿಂದ 3:30 ರವರೆಗೆ ಎರಡು ಗಂಟೆಗಳ ಕಾಲ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆದರೆ ಇದೀಗ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಇನ್ನು ಮುಂದೆ ಮದ್ಯಾಹ್ನ ಒಂದು ಗಂಟೆಗಳ ಕಾಲವಷ್ಟೇ ಅಂದರೆ ಮದ್ಯಾಹ್ನ 2:00 ಗಂಟೆಯಿಂದ 3:00 ಗಂಟೆಯವರೆಗೆ ಮಾತ್ರ ದೇವರ ದರ್ಶನವನ್ನು ಸ್ಥಗಿತಗೊಳಿಸಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಹೆಚ್ಚುವರಿ ಒಂದು ಗಂಟೆ ಸಮಯ ಲಭಿಸುವಂತೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಮುಂದೆ ಬೆಳಿಗ್ಗೆ 6:30 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಹಾಗೂ ಅಪರಾಹ್ನ 3:00 ಗಂಟೆಯಿಂದ ರಾತ್ರಿ 8:30 ರವರೆಗೆ ಭಕ್ತಾದಿಗಳಿಗೆ ಶ್ರೀ ದೇವರ ದರ್ಶನಕ್ಕೆ ಅವಕಾಶ ಇರಲಿದ್ದು, ಮಹಾಮಂಗಳಾರತಿ ಸಮಯದಲ್ಲಿ ಮಾತ್ರ ಈ ಹಿಂದಿನಂತೆ ಅಲ್ಪ ಕಾಲ ದೇವರ ದರ್ಶನವನ್ನು ಸ್ಥಗಿತಗೊಳಿಸಲಾಗುತ್ತದೆ. ಈ ವ್ಯವಸ್ಥೆ ಮೇ.10 ತಾರೀಖಿನಿಂದಲೇ ಜಾರಿಯಾಗಿರುವುದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading