ಇಂದಿನ(ಮೇ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಏರಿಕೆ – ಹೊಸ ಅಡಿಕೆ ಬೆಲೆಯಲ್ಲಿ ಅಲ್ಪ ಇಳಿಕೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 13 ಮೇ 2026
ವಾರ : ಬುಧವಾರ
ಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.

ಅಡಿಕೆ ಧಾರಣೆ
ಹೊಸ ಅಡಿಕೆ : 440 ರಿಂದ 470
ಹಳೆ ಅಡಿಕೆ : 450 ರಿಂದ 550
ಡಬಲ್ ಚೋಲ್ : 450 ರಿಂದ 550
ಫಟೋರಾ : 355 ರಿಂದ 405
ಉಳ್ಳಿಗಡ್ಡೆ : 250 ರಿಂದ 300
ಕರಿಗೋಟು : 265 ರಿಂದ 295
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಆಧಾರದಲ್ಲಿ ದರವನ್ನು ನಿಗದಿಪಡಿಸಲಾಗುವುದು)
ಇಂದು(ಮೇ 13) ಕ್ಯಾಂಪ್ಕೋ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಯ ಧಾರಣೆಯಲ್ಲಿ ₹5 ರಷ್ಟು ಕುಸಿತ ಕಂಡಿದೆ. ಉಳಿದ ಅಡಿಕೆ ವಿಧಗಳು ನಿನ್ನೆ(ಮೇ 12)ಯ ಬೆಲೆಯಲ್ಲೇ ಸ್ಥಿರವಾಗಿವೆ.
ಹೊಸ ಅಡಿಕೆ ಇಳಿಕೆ : ನಿನ್ನೆ(ಮೇ 12) ಗರಿಷ್ಠ ₹475 ಇದ್ದ ಹೊಸ ಅಡಿಕೆ ಧಾರಣೆ ಇಂದು(ಮೇ 13) ₹470 ಕ್ಕೆ ಇಳಿಕೆಯಾಗಿದೆ.
ಸ್ಥಿರತೆ : ಹಳೆ ಅಡಿಕೆ ಮತ್ತು ಚೋಲ್ ಅಡಿಕೆ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ನಿನ್ನೆ(ಮೇ 12) ಏರಿಕೆ ಕಂಡಿದ್ದ ಉಳ್ಳಿಗಡ್ಡೆ ಮತ್ತು ಕರಿಗೋಟು ದರಗಳು ಇಂದೂ(ಮೇ 13) ಅದೇ ಬೆಲೆಯನ್ನು ಕಾಯ್ದುಕೊಂಡಿವೆ.

ಇತರ ಪ್ರಮುಖ ಕೃಷಿ ಉತ್ಪನ್ನಗಳ ಧಾರಣೆ
ಕಾಳುಮೆಣಸು : 590 ರಿಂದ 690
ಹಸಿ ಕೊಕ್ಕೋ : 75 ರಿಂದ 105
ಒಣ ಕೊಕ್ಕೋ : 290 ರಿಂದ 320
ಕೊಬ್ಬರಿ : 130 ರಿಂದ 158
(ಕಾಳುಮೆಣಸಿನ ತೇವಾಂಶ ಮತ್ತು ಲೀಟರ್ ತೂಕದ ಆಧಾರದಲ್ಲಿ ದರದಲ್ಲಿ ವ್ಯತ್ಯಾಸವಾಗುವುದು)
(ಮಿಲ್ಲಿಂಗ್ ಕ್ವಾಲಿಟಿ ಕೊಬ್ಬರಿಯನ್ನು ಮಾತ್ರ ಖರೀದಿ ಮಾಡಲಾಗುವುದು)
ಇಂದು(ಮೇ 13) ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಧಾರಣೆಗಳು ಯಾವುದೇ ಬದಲಾವಣೆ ಕಾಣದೆ ಸ್ಥಿರವಾಗಿವೆ. ನಿನ್ನೆಯ(ಮೇ 12) ಮಾರುಕಟ್ಟೆ ದರವೇ ಇಂದೂ ಕೂಡ ಮುಂದುವರಿದಿದೆ.

ರಬ್ಬರ್ ಧಾರಣೆ
ಗ್ರೇಡ್ : 256.5
ಲಾಟ್ : 216
ಸ್ಕ್ರ್ಯಾಪ್ ಪ್ರಥಮ ದರ್ಜೆ : 152
ಸ್ಕ್ರ್ಯಾಪ್ ದ್ವಿತೀಯ ದರ್ಜೆ : 143
ಇಂದು(ಮೇ 13) ಕ್ಯಾಂಪ್ಕೋ ರಬ್ಬರ್ ಮಾರುಕಟ್ಟೆಯಲ್ಲಿ ಸತತ ಎರಡನೇ ದಿನವೂ ಉತ್ಸಾಹದಾಯಕ ವಾತಾವರಣ ಕಂಡುಬಂದಿದ್ದು, ಎಲ್ಲಾ ವಿಧದ ರಬ್ಬರ್ ಧಾರಣೆಗಳು ಏರಿಕೆ ಕಂಡಿವೆ.
ಲಾಟ್ ರಬ್ಬರ್ ಜಿಗಿತ : ಇಂದು(ಮೇ 13) ಲಾಟ್ ರಬ್ಬರ್ ದರದಲ್ಲಿ ಪ್ರತಿ ಕೆಜಿಗೆ ₹1 ರಷ್ಟು ಏರಿಕೆ ಕಂಡುಬಂದಿದ್ದು, ₹216 ಕ್ಕೆ ತಲುಪಿದೆ.
ಗ್ರೇಡ್ ಮತ್ತು ಸ್ಕ್ರ್ಯಾಪ್ : ಗ್ರೇಡ್ ರಬ್ಬರ್ ಹಾಗೂ ಸ್ಕ್ರ್ಯಾಪ್ ರಬ್ಬರ್‌ನ ಎರಡೂ ವಿಭಾಗಗಳಲ್ಲಿ ತಲಾ 50 ಪೈಸೆ ಏರಿಕೆಯಾಗಿದೆ.

ಕೃಷಿಕರ ಗಮನಕ್ಕೆ : ಈ ಮೇಲಿನ ಮಾರುಕಟ್ಟೆ ಧಾರಣೆಯು ಇಂದಿನ ಮಾರುಕಟ್ಟೆ ಸ್ಥಿತಿ-ಗತಿಯನ್ನು ಆಧರಿಸಿದ್ದು, ಉತ್ಪನ್ನಗಳ ಗುಣಮಟ್ಟ, ತೇವಾಂಶ ಹಾಗೂ ಮಾರುಕಟ್ಟೆ ಅವಕಕ್ಕೆ ಅನುಗುಣವಾಗಿ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಮಂಡಿಗಳಲ್ಲಿ ದರಗಳು ಅಲ್ಪಮಟ್ಟಿಗೆ ವ್ಯತ್ಯಾಸವಿರಬಹುದು. ನಿಖರ ಮಾಹಿತಿಗಾಗಿ ಕೃಷಿಕರು ತಮ್ಮ ಸಮೀಪದ ಕ್ಯಾಂಪ್ಕೋ ಶಾಖೆ, ಮಾರುಕಟ್ಟೆ ಕೇಂದ್ರ ಅಥವಾ ಪರಿಚಿತ ವರ್ತಕರನ್ನು ಸಂಪರ್ಕಿಸಬಹುದಾಗಿದೆ.

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading