ಕುಲ್ಕುಂದ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ(ರಿ.) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್(ರಿ.) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸುಬ್ರಹ್ಮಣ್ಯ ವಲಯ ಭಜನಾ ಪರಿಷತ್ ವಲಯ ನಿರ್ದೇಶಕರಾದ ಸತೀಶ್ ಟಿ.ಎನ್ ರವರ ಅಧ್ಯಕ್ಷತೆಯಲ್ಲಿ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ನ ಅಧ್ಯಕ್ಷರಾದ ಸೋಮಶೇಖರ ಪೈಕರವರು ದೀಪವನ್ನು ಬೆಳಗಿಸುವ ಮುಖೇನ ಉದ್ಘಾಟನೆಯನ್ನು ಮಾಡಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕಿನ ಯೋಜನಾಧಿಕಾರಿಯವರಾದ ಮಾಧವ ಗೌಡರವರು ಮಾತನಾಡುತ್ತಾ, “ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ದೇವರ ಸ್ಮರಣೆ, ಸಂಸ್ಕಾರವನ್ನು ಕಲಿಸಬೇಕು. ಮನೆಯೇ ದೇವಸ್ಥಾನ, ಮಕ್ಕಳ ತಂದೆ ತಾಯಿಯೇ ಮೊದಲ ದೇವರು, ತಂದೆ ತಾಯಿ ಶಿವ ಪಾರ್ವತಿ ಇದ್ದ ಹಾಗೆ. ಮಕ್ಕಳಿಗೆ ಪ್ರತಿ ನಿತ್ಯ ಮನೆಯಲ್ಲಿ ಭಜನೆಯನ್ನು ಮಾಡುವ ಪ್ರವೃತ್ತಿಯನ್ನು ಬೆಳೆಸುವ ಮೂಲಕ ಉತ್ತಮವಾದ ಸಂಸ್ಕಾರವನ್ನು ಕಲಿಸಿಕೊಡಬೇಕು” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯದ ಉದ್ಯಮಿಗಳಾದ ಯಜ್ನೇಶ್ ಆಚಾರ್ಯರವರು ಶುಭಕೋರಿದರು.
ಈ ಕಾರ್ಯಕ್ರಮದಲ್ಲಿ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಸುಬ್ರಹ್ಮಣ್ಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಲಯ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ಸುಬ್ರಹ್ಮಣ್ಯ ತಾಲೂಕು ಭಜನೋತ್ಸವ ಸಮಿತಿಯ ಉಪಾಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ, ಸುಬ್ರಹ್ಮಣ್ಯ ತಾಲೂಕು ಭಜನೋತ್ಸವ ಸಮಿತಿಯ ಉಪಾಧ್ಯಕ್ಷರಾದ ಚಂದ್ರಶೇಖರ ಬಸವನಮೂಲೆ, ತರಬೇತುದಾರರಾದ ಶ್ರೀಮತಿ ನಳಿನಾಕ್ಷಿ.ವಿ ಆಚಾರ್ಯ, ತರಬೇತುದಾರರಾದ ವೆಂಕಟ್ರಮಣ ಆಚಾರ್ಯ, ಕುಲ್ಕುಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಜಯನ್, ಸುಬ್ರಹ್ಮಣ್ಯ ಭಜನಾ ಪರಿಷತ್ ವಲಯ ಅಧ್ಯಕ್ಷರಾದ ಚಂದ್ರಶೇಖರ ಕೊಂದಾಳ, ತರಬೇತುದಾರರಾದ ಆನಂದ ಬಳ್ಪ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕುಲ್ಕುಂದ ಕಲ್ಲಾಜೆಯ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸುಬ್ರಹ್ಮಣ್ಯ ವಲಯ ಭಜನಾ ಪರಿಷತ್ ನ ಪದಾಧಿಕಾರಿಗಳು, ವಲಯ ಭಜನಾ ಮಂಡಳಿಗಳ ಅಧ್ಯಕ್ಷರು ಪದಾಧಿಕಾರಿಗಳು, ಕುಲ್ಕುಂದ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳು, ಸುಬ್ರಹ್ಮಣ್ಯ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು, ಪೋಷಕರು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಕುಲ್ಕುಂದ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಹರಿನಾಕ್ಷಿರವರು ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ.ಕೆ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ವಲಯ ಭಜನಾ ಪರಿಷತ್ ನ ಕಾರ್ಯದರ್ಶಿಗಳಾದ ಚಂದ್ರಾವತಿ ಧನ್ಯವಾದವಿತ್ತರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading