ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅಧಿಕ ಭಕ್ತಾಧಿಗಳು

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಇಂದು(ಮೇ.16) ಶನಿವಾರದಂದು ಸುಮಾರು 500ಕ್ಕೂ ಅಧಿಕ ಭಕ್ತಾಧಿಗಳು ಶ್ರೀ ದೇವರ ದರ್ಶನಕ್ಕೆ ಆಗಮಿಸಿದ್ದು, ಶನಿಪೂಜೆ, ರುದ್ರಾಭಿಷೇಕ, ಹಾಲು-ಪಾಯಸ, ಅವಲಕ್ಕಿ-ಪಂಚಕಜ್ಜಾಯ ಮುಂತಾದ ಸೇವೆಗಳೊಂದಿಗೆ ಮದ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡು ಶ್ರೀದೇವರ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್, ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading