ಬಾಳುಗೋಡು : ಮುಂಡೋಕಜೆ ಭಾಗದ ನೀರಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ ಕೆ.ಪಿ.ಸಿ.ಸಿ ಸದಸ್ಯರಾದ ಜಿ.ಕೃಷ್ಣಪ್ಪ

ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಮುಂಡೋಕಜೆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಇಲ್ಲಿನ ನಿವಾಸಿಗಳು ಚುನಾವಣಾ ಬಹಿಷ್ಕಾರದ ನಿರ್ಧಾರವನ್ನು ಕೈಗೊಂಡಿದ್ದರು. ತಾಲೂಕು ಪಂಚಾಯತ್ ಇ.ಓ ಅವರ ಮುಖಾಂತರ ಇಲ್ಲಿನ ಸಮಸ್ಯೆಗಳನ್ನು ಅರಿತ ಕೆ.ಪಿ.ಸಿ.ಸಿ ಸದಸ್ಯರಾದ ಜಿ.ಕೃಷ್ಣಪ್ಪ ರವರು ಗ್ರಾಮ ಪಂಚಾಯತ್ ಹಾಗೂ ಸ್ಥಳೀಯರನ್ನು ಸಂಪರ್ಕಿಸಿ ಕೊಳವೆ ಬಾವಿ ಕೊರೆಸಲು ಸ್ಥಳ ನಿಗದಿಪಡಿಸಲು ಗ್ರಾಮ ಪಂಚಾಯತ್ ನ ಸಹಕಾರ ಕೋರಿದ್ದು, ಅಂತೆಯೇ ಮೇ.25 ರಂದು ಬೋರ್ ಕೊರೆಸುವ ಕಾರ್ಯ ಯಶಸ್ವಿಯಾಗಿದ್ದು, ಸ್ಥಳೀಯ ನಿವಾಸಿಗಳ ಹೋರಾಟಕ್ಕೆ ಇನ್ನಾದರೂ ಫಲ ಸಿಗಬಹುದು ಎಂಬ ಆತ್ಮವಿಶ್ವಾಸ ಮೂಡಿಸಿದೆ.
ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷರಾದ ಗೋಪಿನಾಥ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಲೋಲಾಕ್ಷ ಕೈಕಂಬ, ಅಚ್ಚುತ ಗುತ್ತಿಗಾರು, ಶರತ್ ಕೆರ್ಮಾಯಿ, ಪ್ರಮೋದ್ ಬಾಳುಗೋಡು, ಜಯರಾಮ್ ಮುಂಡೋಕಜೆ, ಲೋಕೇಶ್, ತಾಲೂಕು ಪಂಚಾಯತ್ ಇ.ಒ ರಾಜಣ್ಣ, ಇಂಜಿನಿಯರ್ ಮಣಿಕಂಠ ಹಾಗೂ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading