ಬಾಳುಗೋಡು ಬಸ್ ನ ಅವ್ಯವಸ್ಥೆ ಸರಿಪಡಿಸುವಂತೆ ವಿದ್ಯಾರ್ಥಿ ಪ್ರತಿನಿಧಿ ಮುಳಿಯ ಸಾತ್ವಿಕ್ ಒತ್ತಾಯ

“ಪುತ್ತೂರು – ಬಾಳುಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌(KA 57 F 0964)‌ನಲ್ಲಿ ಸವಣೂರಿನಿಂದ ಪಂಜವರೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಪೂರ್ಣ ನಿಂತುಕೊಂಡೇ ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದಾಗ ಬಸ್ ಒಳಗೆ ನೀರು ಸೋರಿಕೆಯಾಗುತ್ತಿದ್ದು, ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿದಿನ ಸಂಕಷ್ಟದಲ್ಲೇ ಶಾಲೆ ಹಾಗೂ ಕಾಲೇಜುಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಮೂಲಭೂತ ಸಾರಿಗೆ ಸಮಸ್ಯೆಗಳತ್ತ ಗಮನ ಹರಿಸಬೇಕು. ಬಸ್ ಕೊರತೆ, ಸರಿಯಾದ ನಿರ್ವಹಣೆಯ ಅಭಾವ ಹಾಗೂ ಹಳೆಯ ಬಸ್‌ಗಳಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರಿಗೂ ಸುರಕ್ಷಿತ ಮತ್ತು ಸುಗಮ ಸಾರಿಗೆ ಸೌಲಭ್ಯ ಒದಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಆದುದರಿಂದ ರಾಜ್ಯ ಸರ್ಕಾರ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಬಸ್‌ನ ದುರಸ್ತಿ ಅಥವಾ ಬದಲಾವಣೆ ಮಾಡುವ ಜೊತೆಗೆ ಪುತ್ತೂರು – ಬಾಳುಗೋಡು ಮಾರ್ಗದಲ್ಲಿ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಬೇಕು” ಎಂದು ವಿದ್ಯಾರ್ಥಿ ಪ್ರತಿನಿಧಿ ಮುಳಿಯ ಸಾತ್ವಿಕ್ ಆಗ್ರಹಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading