ಜೂ.03ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ – ತಾಲೂಕಿನ ಎಲ್ಲಾ ದೇವಸ್ಥಾನ ಗಳಲ್ಲಿ ವಿಶೇಷ ಪೂಜೆ, ಹಾಗೂ ಎಲ್ಲಾ ಮಸೀದಿ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

“ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ನಾಡಿನ ಜನತೆಗೆ ಸಂತಸ ತಂದಿದೆ. ಅಲ್ಲದೆ ಮಾನ್ಯ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಡೆದುಕೊಂಡು ಬಂದಿರುವ ಕ್ರಮ ಇಡೀ ದೇಶಕ್ಕೆ ಮಾದರಿ ಮತ್ತು ಕಾಂಗ್ರೆಸ್ ಪಕ್ಷದ ಗೌರವ ವನ್ನು ಅತ್ಯಂತ ಎತ್ತರಕ್ಕೆ ತಂದಿದ್ದು ದೇಶದ ರಾಜಕಾರಣಕ್ಕೆ ಮಾದರಿ ಆಗಿದೆ, ಆದುದರಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಯ ದೃಷ್ಟಿಯಲ್ಲಿ ಅವರಿಬ್ಬರೂ ಪಕ್ಷದ ಎರಡು ಕಣ್ಣುಗಳು ಇದ್ದಂತೆ. ಅವರಿಬ್ಬರೂ ನಮ್ಮ ಮನೆಯವರು ಎಂಬ ಭಾವನೆ ಎಲ್ಲರಲ್ಲೂ ಇರಬೇಕು. ಆದ ಕಾರಣ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಇಬ್ಬರಿಗೂ ಒಳಿತು ಮತ್ತು ಯಶಸ್ಸಿಗಾಗಿ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ಜೂ.3ರಂದು ವಿಶೇಷ ಪೂಜೆ ನೆರವೇರಿಸಿ ಮುಂದಿನ ಯಶಸ್ಸಿಗಾಗಿ ಪ್ರಾರ್ಥನೆ ಹಾಗೂ ಮಸೀದಿ ಹಾಗೂ ಚರ್ಚ್ ಗಳಲ್ಲಿ ಸಹ ಪ್ರಾರ್ಥನೆ ಸಲ್ಲಿಸುವಂತೆ ಎಲ್ಲಾ ವ್ಯವಸ್ಥಾಪನಾ ಸಮಿತಿಯವರು ಮತ್ತು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಅಲ್ಲದೆ ಸಂಜೆ 3:30ರಿಂದ ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ಎಲ್.ಇ.ಡಿ ಪರದೆ ಮೂಲಕ ಪ್ರಮಾಣವಚನದ ನೇರಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಪಕ್ಷದ ಎಲ್ಲಾ ಮುಖಂಡರು ಪದಾಧಿಕಾರಿಗಳು, ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಮತ್ತು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು” ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading