ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ 30 ಸಾವಿರಕ್ಕಿಂತಲೂ ಅಧಿಕ ಭಕ್ತರ ಆಗಮನ

ಸುಬ್ರಹ್ಮಣ್ಯ ಮೇ 31 : ದಕ್ಷಿಣ ಭಾರತದ ಹೆಸರಾಂತ ನಾಗರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮೇ.31 ರವಿವಾರದಂದು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ 30,000ಕ್ಕಿಂತಲೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ,ತೀರ್ಥ ಪ್ರಸಾದ ಹಾಗೂ ಭೋಜನ ಸ್ವೀಕರಿಸಿದರು. ಮುಂಜಾನೆಯಿಂದಲೇ ಪವಿತ್ರ ತೀರ್ಥ ಸ್ನಾನಕ್ಕಾಗಿ ಕುಮಾರಧಾರ ಸ್ನಾನ ಘಟ್ಟದಲ್ಲಿ ಭಕ್ತರು ಮಿಂದು ಶ್ರೀ ದೇವಳದ ಹೊರಾಂಗಣ ಪ್ರವೇಶಿಸಿ ಸರತಿಯ ಸಾಲಿನಲ್ಲಿ ಶ್ರೀ ದೇವರ ದರ್ಶನ ಮಾಡಿದರು. ಭಕ್ತರಿಗೆ ಲಡ್ಡು ಪ್ರಸಾದ ಹಾಗೂ ಪಂಚಕಜ್ಜಾಯ ತೀರ್ಥ ಬಾಟಲಿ ಇತ್ಯಾದಿಗಳಿಗಾಗಿ ಶ್ರೀ ದೇವಳದ ಹೊರ ಭಾಗದಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಭೋಜನಕ್ಕಾಗಿ ಶ್ರೀದೇವಳದ ಷಣ್ಮುಖ ಭೋಜನ ಶಾಲೆ ಹಾಗೂ ಬಫೆ ವ್ಯವಸ್ಥೆಯನ್ನು ಆದಿ ಸುಬ್ರಹ್ಮಣ್ಯದ ಭೋಜನ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಶನಿವಾರ ರಾತ್ರಿ ಇಂದಲೇ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸಿ ಶ್ರೀ ದೇವಳದ ವಸತಿಗೃಹ ಹಾಗೂ ಖಾಸಗಿ ವಸತಿ ಗೃಹ ಗಳಲ್ಲಿ ವಾಸ್ತವ್ಯ ಹೂಡಿದ್ದರು. ಇತ್ತ ಈ ದೇವಳದ ಪರಿಸರದಲ್ಲಿರುವ ಪಾರ್ಕಿಂಗ್ ಪ್ರದೇಶಗಳು ಸವಾರಿ ಮಂಟಪದ ಸಮೀಪ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಮುಂಬಾಗದ ಪ್ರದೇಶ ಹಾಗೂ ಆದಿ ಸುಬ್ರಮಣ್ಯದ ಇಕ್ಕೆಲಗಳಲ್ಲಿ ವಾಹನಗಳು ತುಂಬಿದ್ದವು. ಆದಿ ಸುಬ್ರಹ್ಮಣ್ಯಕ್ಕೆ ತೆರಳಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ಶ್ರೀ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಕ್ತರಿಗೆ ತೊಂದರೆ ಆಗದಂತೆ ಹಾಗೂ ಸುಗಮ ದರ್ಶನ ತೀರ್ಥ ಪ್ರಸಾದ ಭೋಜನಕ್ಕಾಗಿ ವ್ಯವಸ್ಥೆಗಳನ್ನು ಮಾಡಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading