ಸವೇರಪುರ ಶಾಲಾ ಪ್ರಾರಂಭೋತ್ಸವ ಹಾಗೂ ಹೊಸ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

. . . . . . . . .

ಸವೇರಪುರ ಶಾಲೆಯಲ್ಲಿ ಜ್ಞಾನ ದೇಗುಲಕ್ಕೆ ಮರಳಿ ಬರುವ ವಿದ್ಯಾರ್ಥಿಗಳಿಗೆ  ಅದ್ದೂರಿ ಸ್ವಾಗತ ಕಾರ್ಯಕ್ರಮ ನಡೆಯಿತು. ಶಾಲೆಯ ಹೊಸ ಶೈಕ್ಷಣಿಕ ವರ್ಷದ ಕಾರ್ಯಕ್ರಮ ಹಾಗೂ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಆಕರ್ಷಕ ವಾದ್ಯಘೋಷಗಳ ಮೆರವಣಿಗೆಯೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ಶಾಲೆಗೆ ಸ್ವಾಗತಿಸಲಾಯಿತು. ವಾದ್ಯಗಳ ನಿನಾದ ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸಿತು. ಮೆರವಣಿಗೆಯ ನಂತರ ಮುಖ್ಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವು ಆರಂಭವಾಯಿತು.
ಶಾಲಾ ವಿದ್ಯಾರ್ಥಿನಿಯರ ಮನಮೋಹಕ ಪ್ರಾರ್ಥನಾ ನೃತ್ಯದೊಂದಿಗೆ ಕಾರ್ಯಕ್ರಮಕ್ಕೆ ಭಕ್ತಿಪೂರ್ವಕ ಚಾಲನೆ ನೀಡಲಾಯಿತು. ತದನಂತರ ಶಾಲೆಯ  ಮುಖ್ಯ ಶಿಕ್ಷಕಿಯಾದ ಸಿಸ್ಟರ್ ಅನಿತಾ ಫೆರ್ನಾಂಡಿಸ್ ಅವರು ವೇದಿಕೆಯಲ್ಲಿದ್ದ ಗಣ್ಯರನ್ನು ಹಾಗೂ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು  ಸ್ವಾಗತಿಸಿದರು.
ನಂತರ ಶಾಲೆಯ ಸಂಚಾಲಕರಾದ ಫಾ. ಜಯಪ್ರಕಾಶ್ ಡಿಸೋಜರವರು ಜ್ಞಾನದ ಸಂಕೇತವಾಗಿ ದೀಪವನ್ನು ಬೆಳಗಿಸುವುದರ ಮೂಲಕ ಅಧಿಕೃತವಾಗಿ ಹೊಸ ಶೈಕ್ಷಣಿಕ ವರ್ಷದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ನೂತನ ಸಹಶಿಕ್ಷಕಿ ಸಿಸ್ಟರ್ ವಿನೀಶಾ ರೊಡ್ರಿಗಸ್ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸಿದರು. ಹಾಗೂ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಎಲ್ಲರಿಗೂ ಪರಿಚಯಿಸಿ, ಅವರನ್ನು ಪ್ರೀತಿಯಿಂದ ಬರಮಾಡಿಕೊಳ್ಳಲಾಯಿತು. ತದನಂತರ ಶಾಲಾ ಸಂಚಾಲಕರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಹೊಸ ಶೈಕ್ಷಣಿಕ ವರ್ಷವು ಎಲ್ಲರಿಗೂ ಯಶಸ್ಸನ್ನು ತರಲಿ ಎಂದು ಹಾರೈಸಿದರು. ವಿದ್ಯಾರ್ಥಿಗಳು ಶಿಸ್ತು, ಕಠಿಣ ಪರಿಶ್ರಮ ಮತ್ತು ಸತ್ಪ್ರಜೆಯಾಗುವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ತಮ್ಮ ಶುಭ ಹಾರೈಕೆಯ ಮಾತುಗಳಲ್ಲಿ ತಿಳಿಸಿದರು.
ಶಾಲೆಯ ಶಿಕ್ಷಕಿ ವನಿತಾ ಬಿ. ವಂದಿಸಿದರು..   ಶಿಕ್ಷಕಿ ಶ್ರೀಮತಿ ದಿವ್ಯಶ್ರೀ ನಿರೂಪಿಸಿದರು.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading