ಜೂ.07 ರಂದು ಕುಕ್ಕುಜಡ್ಕದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.), ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ, ಸೋಣಂಗೇರಿ ವಲಯ, ಸುಳ್ಯ ತಾಲೂಕು ಹಾಗೂ ಗುರುದೇವಾ ಸೇವಾ ಬಳಗ, ಪಿಲಿಕಜೆ ಇವರ ಸಂಯುಕ್ತ ಆಶ್ರಯದಲ್ಲಿ, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮಂಗಳೂರು ಇವರ ಸಹಕಾರದೊಂದಿಗೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಬೆಳ್ಳಿಹಬ್ಬದ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜೂನ್ 7ರಂದು  ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಜಡ್ಕದಲ್ಲಿ ನಡೆಯಲಿದೆ.
ಶಿಬಿರವು ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಸಲಹೆಗಳನ್ನು ನೀಡಲಾಗುವುದು. ಎ.ಜೆ. ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಿದ್ದಾರೆ.
ಈ ಪ್ರಯುಕ್ತ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಣಂಗೇರಿ ವಲಯ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಅಧ್ಯಕ್ಷರಾದ  ಕೃಷ್ಣಪ್ಪ ನಾಯ್ಕ ಮಹಾಬಲಡ್ಕ ವಹಿಸಲಿದ್ದಾರೆ. ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಅಧ್ಯಕ್ಷರಾದ  ವೆಂಕಟ್ ವಳಲಂಬೆ, ಬ್ಲಾಕ್ ಕಾಂಗ್ರೆಸ್ ಸುಳ್ಯ ತಾಲೂಕು ಅಧ್ಯಕ್ಷರಾದ  ರಾಧಾಕೃಷ್ಣ ಬೊಳ್ಳೂರು, ಚೊಕ್ಕಾಡಿ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕುಕ್ಕುಜಡ್ಕದ ಅಧ್ಯಕ್ಷರಾದ  ಕೇಶವ ಕರ್ಮಾಜೆ, ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯದ ಪ್ರಧಾನ ಕಾರ್ಯದರ್ಶಿ  ಮುರಳಿ ನಳಿಯಾರು, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ  ವಿನಯ ಸಂಕೇಶ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ  ಮಾತೇಶ್ ಭಂಡಾರಿ, ರಜತ ಸಂಭ್ರಮ ಸಮಿತಿಯ ಕೋಶಾಧಿಕಾರಿ ಶ್ರೀ ವಿಶ್ವನಾಥ ಶೆಟ್ಟಿ, ರಜತ ಸಂಭ್ರಮ ಸಮಿತಿಯ ಸಂಚಾಲಕರಾದ ಶ್ರೀ ಗಣೇಶ್ ಪಿಲಿಕಜೆ ಹಾಗೂ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷರಾದ ಶ್ರೀ ಸುಹಾಸ್ ಅಲೆಕ್ಕಾಡಿ ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತಿಯಾಗಿ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸವಿತಾ, ಘಟ ಸಮಿತಿ ಕುಕ್ಕುಜಡ್ಕ ಹಾಗೂ ಒಡಿಯೂರು ಶ್ರೀ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಪೈಲೂರು, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿಯ ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಮುಂಡಾಜೆ, ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿಯ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ತಂಟೆಪ್ಪಾಡಿ, ಶ್ರೀ ಗುರುದೇವಾ ಸೇವಾ ಬಳಗ ಪಿಲಿಕಜೆಯ ಅಧ್ಯಕ್ಷರಾದ  ಕರುಣಾಕರ ಗೌಡ ಪುಳಿಮರಡ್ಕ ಹಾಗೂ ಅತ್ಯುತ್ತಮ ಕೃಷಿ ಸಾಧಕ ಪುರಸ್ಕೃತರಾದ  ಚಂದ್ರಶೇಖರ ಡಿ.ಎಸ್. ಉಪಸ್ಥಿತರಿರುವರು.
ಗ್ರಾಮೀಣ ಭಾಗದ ಜನರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading