ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ”

ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ” ಯನ್ನು ಜೂ. 04ರಂದು ಕಾಲೇಜಿನ ಶ್ವಾಸಕೋಶ ವೈದ್ಯಕೀಯ ವಿಭಾಗದ ಆಯೋಜನೆಯಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ಹಾಗೂ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಸಹಯೋಗದೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ ಕೆ.ವಿ ಚಿದಾನಂದ ರವರು ಮಾತನಾಡುತ್ತಾ “ತಂಬಾಕು ಸೇವನೆಯು ಕ್ಯಾನ್ಸರ್, ಹೃದಯರೋಗ, ಉಸಿರಾಟದ ತೊಂದರೆ ಸೇರಿದಂತೆ ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ತಿಳಿಸಿದರು. ಸಿಗರೇಟ್, ಬೀಡಿ, ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಯಾವುದೇ ರೂಪದ ತಂಬಾಕು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನತೆ ಇವುಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ತಂಬಾಕು ಸೇವನೆಯನ್ನು ತ್ಯಜಿಸಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿದರು.”  
ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಪ್ರಾಸ್ತಾವಿಕ ಮಾತುಗಳೊಂದಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಡಾ. ಸುಶ್ಮಿತಾ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ಬಳಿಕ ಶ್ವಾಸಕೋಶ ವೈದ್ಯಕೀಯ ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಪ್ರೀತಿರಾಜ್ ಬಲ್ಲಾಳ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಿಬ್ಬಂದಿ ವರ್ಗ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಸ್ವೀಕರಿಸಿದರು.
ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು ಹಾಗೂ ಸೇವನೆಯ ಚಟದಿಂದ ಹೊರಬರುವ ವಿಧಾನಗಳನ್ನು ವಿದ್ಯಾರ್ಥಿಗಳು ಕಿರು ಪ್ರಹಸನದ ಮೂಲಕ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಎಮರ್ಜೆನ್ಸಿ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಮ್ಯಾಕ್ಸಿಮ್ ಹೆರಾಲ್ಡ್ ಲಿವೀಸ್, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿ ಪ್ರಾಂಶುಪಾಲರಾದ ಡಾ. ಮನೀಶ್, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲರಾದ ಡಾ. ಪ್ರಮೋದ್ ಕೆ.ಜೆ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲರಾದ ಚಂದ್ರಾವತಿ ಕೆ.ಎಸ್ ಉಪಸ್ಥಿತರಿದ್ದರು. 
ಕಾರ್ಯಕ್ರಮದಲ್ಲಿ ಡಾ. ಅನಿರುದ್ಧ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು. ಡಾ. ವೈಷ್ಣವಿ ಪ್ರಾರ್ಥಿಸಿದರು. ಎಲ್ಲಾ ವಿಭಾಗ ಮುಖ್ಯಸ್ಥರು, ಭೋದಕ-ಭೋದಕೇತರ ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading