ಸುಬ್ರಹ್ಮಣ್ಯದ ವಾಲ್ಮೀಕಿ ವಸತಿ ಶಾಲೆಯಲ್ಲಿ ಸಂಭ್ರಮದ ಪ್ರವೇಶೋತ್ಸವ

ಸುಬ್ರಹ್ಮಣ್ಯ ಜೂನ್ 05 : ಸುಬ್ರಹ್ಮಣ್ಯದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವವು ಸಂಭ್ರಮದಿಂದ ಜೂನ್ 01 ರಂದು ಜರಗಿತು. ಆರಂಭದಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಾಲಾ ಆವರಣದಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನದ ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದರು. ತದನಂತರ ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಯಿತು. ವಿದ್ಯಾರ್ಥಿಗಳ ಪೋಷಕರು ಈ ಸಂದರ್ಭದಲ್ಲಿ ಹಾಜರಿದ್ದರು. ವಸತಿ ಶಾಲಾ ಮುಖ್ಯ ಶಿಕ್ಷಕ ಬಸವರಾಜ್ ಶಿಕ್ಷಕ ವೃಂದದವರು ,ಅಡುಗೆಯವರು ಸಹಾಯಕರು, ಈ ಸಂದರ್ಭದಲ್ಲಿ ಹಾಜರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading