ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸೋಣಂಗೇರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನದ ಅಂಗವಾಗಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸೋಣಂಗೇರಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಸಮಾರಂಭ ಹಾಗೂ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಂಜಿತಾ ಪಿ ಉಪ ವಲಯ ಅರಣ್ಯಾಧಿಕಾರಿ ಜಾಲ್ಸೂರು ಶಾಖೆ ಹಾಗೂ ಖ್ಯಾತ ಲಿಂಗ.ಎಸ್.ಕೆ ಗಸ್ತು ಅರಣ್ಯ ಪಾಲಕರು ಪುತ್ತೂರು ವಲಯ ಇವರು ಭಾಗವಹಿಸಿ ಪರಿಸರ ಸಂರಕ್ಷಣೆಯ ಹೊಣೆ, ವಿದ್ಯಾರ್ಥಿಗಳ ಪಾತ್ರ, ಪರಿಸರದ ಸ್ವಚ್ಛತೆಯ ಬಗ್ಗೆ ತಿಳಿಸಿದರು. 
ಮುಖ್ಯ ಅತಿಥಿಗಳಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾದ ಯಶ್ವಿತ್ ಕಾಳಮ್ಮನೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಿದಾನಂದ ಕುಕ್ಕನ್ನೂರು, ಮುಖ್ಯ ಶಿಕ್ಷಕರಾದ ಕುಸುಮಾವತಿ ಭಾಗವಹಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದ ಬಳಿಕ ಸೋಣಂಗೇರಿ ಶಾಲಾ ವಠಾರದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಗಿಡಗಳನ್ನು ನೆಡಲಾಯಿತು.
ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪೋಷಕರಿಗೆ ಗಿಡಗಳನ್ನು ಉಚಿತವಾಗಿ ವಿತರಿಸಲಾಯಿತು. ಮತ್ತು ಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಸತ್ಯ ಶಾಂತಿ ತ್ಯಾಗ ಮೂರ್ತಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ತಾರಾ ಮಾದವ ಚೂಂತಾರು ವಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಮಂಜುನಾಥ್ ಮಡ್ತಿಲ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading