ಕೊಲ್ಲಮೊಗ್ರು : ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು(A.O.L.E).R ಸುಳ್ಯ  ಇಲ್ಲಿ 2026-27ನೇ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಸಭೆಯು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕಮಲಾಕ್ಷ ಮುಳ್ಳುಬಾಗಿಲು ಇವರ ಅಧ್ಯಕ್ಷತೆಯಲ್ಲಿ ಜೂ.06 ರಂದು ನಡೆಯಿತು. ವಯೋನಿವೃತ್ತಿಯನ್ನು ಹೊಂದಿದ್ದು ಆದಾಗ್ಯೂ ಪ್ರಸ್ತುತ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ವೆಂಕಟ್ರಮಣ ಕೊಪ್ಪಡ್ಕ ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ತೇಜಾವತಿ ಅಂಬೆಕಲ್ಲು, ಮುಖ್ಯ ಗುರುಗಳಾದ ಸುರೇಶ್ ಪಿ.ಕೆ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭೆಯಲ್ಲಿ ಪ್ರಸ್ತುತ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪಠ್ಯೇತರ ಕಾರ್ಯಕ್ರಮಗಳ ಬಗ್ಗೆ ಮುಖ್ಯಗುರುಗಳಾದ ಸುರೇಶ್ ಪಿ.ಕೆ ಮಾಹಿತಿ ಹಂಚಿಕೊಳ್ಳಲಾಗಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕಮಲಾಕ್ಷ ಮುಳ್ಳುಬಾಗಿಲು ಈ ವರ್ಷದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಸಹಶಿಕ್ಷಕರಾದ ರಾಜೇಶ್ ಸ್ವಾಗತಿಸಿ ಚಂದ್ರು ಧನ್ಯವಾದ ಸಮರ್ಪಿಸಿದರು. ಹಿಂದಿ ಶಿಕ್ಷಕರಾದ ಲೋಕನಾಥ ಗೌಡ ಇವರು ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading