ಬಿಳಿನೆಲೆ : ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

ಬಿಳಿನೆಲೆ : “ಮಾನವರಿಗೂ,ಪ್ರಾಣಿ-ಪಕ್ಷಿಗಳಿಗೂ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವಿದೆ. ಅಂತಹ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ಪರಿಸರ ಪ್ಲಾಸ್ಟಿಕ್ ಮುಕ್ತ ಪರಿಸರವಾಗಿರುವಂತೆ ನಾವೆಲ್ಲರೂ ಜಾಗೃತವಹಿಸೋಣ” ಎಂದು ಸುಬ್ರಹ್ಮಣ್ಯ ವಲಯದ ವಲಯ ಅರಣ್ಯಾಧಿಕಾರಿಗಳಾದ ಅಪೂರ್ವ ಆಚ್ರಪ್ಪಾಡಿ ಹೇಳಿದರು. ಇವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಇಕೋ ಕ್ಲಬ್ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇದರ ಜಂಟಿ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀಕೃಷ್ಣಶರ್ಮ, ಅರಣ್ಯ ಸಂರಕ್ಷಕರಾದ ಪರಮೇಶ್ವರ, ಬಿಳಿನೆಲೆ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾದ ಸತೀಶ್ ಕಳಿಗೆ, ಚಿತ್ರಕಲಾ ಆಧ್ಯಾಪಕರಾದ ದಿನೇಶ್ ಕುಂದರ್ ಮುಂತಾದವರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಸತ್ಯಶಂಕರ್ ಭಟ್ ಸ್ವಾಗತಿಸಿದರು. ವೇದವ್ಯಾಸ ವಿದ್ಯಾಲಯದ ಮುಖ್ಯ ಶಿಕ್ಷಕರಾದ ಪ್ರಶಾಂತ್ ವಂದಿಸಿದರು. ವಿಜ್ಞಾನ ಶಿಕ್ಷಕರಾದ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading