ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಅರಣ್ಯ ಸಂರಕ್ಷಕರು ಹಾಗೂ ಗೌರವ ವನ್ಯಜೀವಿ ವಾರ್ಡನ್ ಭುವನೇಶ್ವರ್ ಉಪಸ್ಥಿತರಿದ್ದು “ವನ್ಯಜೀವಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಮುಂದಿನ ಭವಿಷ್ಯಕ್ಕಾಗಿ ಪ್ರಕೃತಿಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಎಲ್ಲಾ ವಿದ್ಯಾರ್ಥಿಗಳು ಇದರ ಕಡೆಗೆ ಹೆಚ್ಚು ಗಮನ ಹರಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. “ಬೀಜಪ್ರಸರಣದ ಮೂಲಕ ವನ್ಯಜೀವಿಗಳು ಕಾಡಿನ ಬೆಳವಣಿಗೆಯಲ್ಲಿ ಹೇಗೆ ಪಾತ್ರವಹಿಸುತ್ತವೆ ಎಂಬುವುದನ್ನು ಪ್ರಾತ್ಯಕ್ಷಿಕೆಯ ಮುಖಾಂತರ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.
ಶಾಲಾ ಮುಖ್ಯ ಶಿಕ್ಷಕರಾದ ನಾಗರಾಜ್.ಜೆ.ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ “ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ನಮ್ಮ ಆರೋಗ್ಯವನ್ನು ಹಾಗೂ ಪರಿಸರವನ್ನು ಉಳಿಸೋಣ” ಎಂದು ಹೇಳಿದರು.
ಶ್ರೀಮತಿ ಚಂದ್ರಮತಿ.ಕೆ ಸ್ವಾಗತಿಸಿ ಶ್ರೀಮತಿ ಶೃತಿ.ಎನ್.ಜಿ ವಂದಿಸಿದರು. ಅರ್ಚನಾ.ಕೆ.ವಿ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading