ಬಾಳುಗೋಡು : “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಬಾಳುಗೋಡು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ನಾಗೇಶ್ ಟಿ ರವರ ಅಧ್ಯಕ್ಷತೆಯಲ್ಲಿ ಜೂ.07 ರಂದು “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ದ.ಕ.ಜಿ.ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡಿನಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ವಲಯ ಜನಜಾಗೃತಿ ವಲಯ ಅಧ್ಯಕ್ಷರಾದ ಸತೀಶ್ ಟಿ.ಎನ್ ರವರು ದೀಪ ಪ್ರಜ್ವಲಿಸಿ ಮಾತನಾಡುತ್ತಾ, “ಜನಜಾಗೃತಿ ವೇದಿಕೆಯಲ್ಲಿ ಮದ್ಯವರ್ಜನಾ ಶಿಬಿರ, ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ, ಮಾದಕ ವಸ್ತುಗಳ ವಿರೋಧಿ ದಿನ, ನವಜೀನೋತ್ಸವ ಕಾರ್ಯಕ್ರಮ, ಜನಜಾಗೃತಿ ಸಮಾವೇಶ ಕಾರ್ಯಕ್ರಮ ಇಂತಹ ಹತ್ತು ಹಲವಾರು ಕಾರ್ಯಕ್ರಮಗಳನ್ನು ಪೂಜ್ಯರ ಆಶಯದಂತೆ ಹಮ್ಮಿಕೊಳ್ಳಲಾಗಿದೆ, ಅದರಲ್ಲಿ ವಿಶ್ವ ತಂಬಾಕು ದಿನಾಚರಣೆಯ ಕಾರ್ಯಕ್ರಮದಲ್ಲಿ ಸದಸ್ಯರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ಕೊಟ್ಟು, ಅವರ ಅರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುತ್ತದೆ” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಲ್ಮಕಾರು ಸಿ.ಎಚ್.ಒ ರವರಾದ ರಾಜೇಶ್ ರವರು ಮಾತನಾಡುತ್ತಾ, “ಹಳ್ಳಿಗಳಲ್ಲಿ ಹೆಚ್ಚಿನ ಸದಸ್ಯರು ಎಲೆ ಅಡಿಕೆ ಜೊತೆಗೆ ತಂಬಾಕು ಸೇವನೆ, ಬೀಡಿ ಸಿಗರೇಟ್, ಗುಡ್ಕ ಸೇವನೆಯನ್ನು ಮಾಡುತ್ತಾರೆ. ಇಂತಹ ದುಶ್ಚಟಗಳಿಂದ ಮಾನವನ ಅರೋಗ್ಯ ಕೆಡುತ್ತದೆ. ಕ್ಯಾನ್ಸರ್‌ನಂತಹ ಮಾರಕ ರೋಗಗಳು ಉದ್ಭವಗೊಳ್ಳುತ್ತದೆ. ಇದರಿಂದಾಗಿ ಲಕ್ಷಗಟ್ಟಲೆ ಹಣವನ್ನು ಆಸ್ಪತ್ರೆಗಳಿಗೆ ಖರ್ಚು ಮಾಡಬೇಕಾಗುತ್ತದೆ. ಇಂತಹ ದುಶ್ಚಟಗಳಿಂದ ಮಾನವನ ಆಯುಷ್ಯ ಕೂಡ ಕಡಿಮೆ ಆಗುತ್ತದೆ. ಇದರ ಚಟ ಇದ್ದವರು ನಿಧಾನವಾಗಿ ತಂಬಾಕುನಂತಹ ವಸ್ತುಗಳ ಸೇವನೆಯನ್ನು ಕಡಿಮೆ ಮಾಡಿ, ಅದರ ಚಟದಿಂದ ದೂರ ಇರಬೇಕು. ಪ್ರತಿದಿನ ಯೋಗ ಅಭ್ಯಾಸಗಳನ್ನು ರೂಢಿ ಮಾಡಿಕೊಳ್ಳಬೇಕು. ದುಶ್ಚಟಗಳ ಸೇವನೆಯ ಬದಲಾಗಿ ಹಣ್ಣು ಹಂಪಲುಗಳ ಸೇವನೆಯನ್ನು ಹೆಚ್ಚು ಮಾಡಬೇಕು. ಹೀಗೆ ಮಾಡಿದಾಗ ದುಶ್ಚಟಗಳಿಂದ ದೂರ ಸರಿದು ನಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳಬಹುದು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ.ಕೆ ರವರು ಪ್ರಾಸ್ತವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ವಾಸುದೇವ, ತಿಮ್ಮಪ್ಪ, ನೂತನ ಅಧ್ಯಕ್ಷರಾದ ನಿತಿನ್ ಕುಮಾರ್, ಸೇವಾಪ್ರತಿನಿಧಿಯವರಾದ ಶ್ರೀಮತಿ ದೀಕ್ಷಾ, ಸೇವಾದಾರರಾದ ಶ್ರುತಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನವಜೀವನ ಸಮಿತಿಯ ಸದಸ್ಯರುಗಳು, ಒಕ್ಕೂಟದ ಸದಸ್ಯರುಗಳು ಭಾಗವಹಿಸಿದ್ದರು.
ಜೈ ಶ್ರೀರಾಮ್ ಸಂಘದ ಸದಸ್ಯರಾದ ಶ್ರೀಮತಿ ಅಕ್ಷತಾರವರು ಸ್ವಾಗತಿಸಿದರು, ಒಕ್ಕೂಟದ ಕೋಶಾಧಿಕಾರಿಯವರಾದ ವಾಸುದೇವರವರು ಧನ್ಯವಾದ ಸಮರ್ಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading