ಸುಳ್ಯ : ಟಿ.ಬಿ ನಿರ್ಮೂಲನೆ, ಮಹಿಳೆಯರ ಆರೋಗ್ಯ ಮತ್ತು ರಕ್ಷಣೆ ಹಾಗೂ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಕುರಿತು ಮಾಹಿತಿ ಕಾರ್ಯಗಾರ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ(ರಿ.) ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 08 ರಂದು “ಟಿ.ಬಿ ನಿರ್ಮೂಲನೆ, ಮುಟ್ಟಿನ ನೈರ್ಮಲ್ಯ ದಿನ, ಗರ್ಭಕೋಶದ ಕ್ಯಾನ್ಸರ್ ಹಾಗೂ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಕುರಿತು ಮಾಹಿತಿ ಕಾರ್ಯಗಾರವು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. 
ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋದಾ ಬಾಳೆಗುಡ್ಡೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಕೇರ್ ಎನ್ ಸೇಫ್ ನ ಆರೋಗ್ಯ ಸಲಹೆಗಾರರಾದ ಬಿಟ್ಟಿ ಬಿ ನೆಡುನೀಲಮ್, ಆಯುಷ್ಮಾನ್ ಆರೋಗ್ಯ ಕೇಂದ್ರ ಸುಳ್ಯದ CHO ಕ್ರಿಸ್ಟಾಲ್ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಲೀಲಾವತಿ, ಆಯುಷ್ಮಾನ್ ಆರೋಗ್ಯ ಕೇಂದ್ರ ಸುಳ್ಯ, ಶಿಶು, ಮಕ್ಕಳ ಮತ್ತು ಮಹಿಳಾ ಇಲಾಖೆ ಸುಳ್ಯ ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ವಿಜಯ.ಕೆ, ತಾಲೂಕು NRLM ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಶ್ವೇತಾ, ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ದಿವ್ಯಾ ಸಜನ್ ಗುಡ್ಡೆಮನೆ, ಜತೆ ಕಾರ್ಯದರ್ಶಿ ಶ್ರೀಮತಿ ಅರುಣ ಉಪಸ್ಥಿತರಿದ್ದರು.   
ಕಾರ್ಯನಿರ್ವಾಹಕ ಅಧಿಕಾರಿಯವರು “ಮಹಿಳೆಯರ ಆರೋಗ್ಯದ ಕಾಳಜಿ ಬಗ್ಗೆ, ದೈಹಿಕ ಸಮಸ್ಯೆಗಳು, ಕ್ಯಾನ್ಸರ್ ಬಗ್ಗೆ ಮುಟ್ಟಿನ ತೊಂದರೆಯ ಬಗ್ಗೆ ಮಾಹಿತಿಯ ಕೊರತೆ ಇರುವಲ್ಲಿ ನಮ್ಮ ಕಮಿಟಿಯಿಂದ ಮಾಹಿತಿ ಒದಗಿಸುವುದನ್ನು ಮಾಡಬೇಕಾಗುತ್ತದೆ. ಹಾಗೂ ಶಾಲೆ ಕಾಲೇಜುಗಳಲ್ಲಿ ಮಕ್ಕಳಿಗೆ ಇಂತಹ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು CRP ಗಳು ಕೊಡುವಂತೆ ತಾಲೂಕು ಶಿಕ್ಷಣಾಧಿಕಾರಿಯವರ ಗಮನಕ್ಕೆ ತರುತ್ತೇನೆ” ಎಂದು ಹೇಳಿದರು.
ತಾಲೂಕು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋದ ಬಾಳೆಗುಡ್ಡೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. 
ಕಾರ್ಯದರ್ಶಿ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ಮಹಿಳೆಯರ ಮುಟ್ಟಿನ ನೈರ್ಮಲ್ಯದ ಬಗ್ಗೆ ಹಾಗೂ ಕೇರ್ ಎನ್ ಸೇಫ್ ಸ್ಯಾನಿಟರಿ ಪ್ಯಾಡ್ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿ ಪ್ರತಿ ಗ್ರಾಮದಲ್ಲಿ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.  
ಕೇರ್ ಎನ್ ಸೇಫ್ ನ ಆರೋಗ್ಯ ಸಲಹೆಗಾರರಾದ ಬಿಟ್ಟಿ ಬಿ ನೆಡುನೀಲಮ್ ರವರು ಮಹಿಳೆಯರು ಅನುಭವಿಸುವ ಅರೋಗ್ಯ ಸಮಸ್ಯೆಗಳ ಕುರಿತು, ಗರ್ಭಕೋಶದ ಕ್ಯಾನ್ಸರ್ ಹರಡುವುದನ್ನು ಯಾವ ರೀತಿ ತಡೆಗಟ್ಟಬಹುದು ಹಾಗೂ ಅದು ಯಾವ ರೀತಿಯಾಗಿ ಕ್ಯಾನ್ಸರ್ ಬರುವುದು ಎಂಬುದನ್ನು ಸ್ಯಾನಿಟರಿ ಪ್ಯಾಡ್ ಬಳಕೆಯ ಬಗ್ಗೆ ಪ್ರಾಯೋಗಿಕವಾಗಿ ತಿಳಿಯಪಡಿಸಿದರು. ಮತ್ತು ಸ್ಯಾನಿಟರಿ ಪ್ಯಾಡ್ ವಿಲೇವಾರಿ ಮಾಡುವಂತ ವಿಧಾನದ ಬಗ್ಗೆ ಯೂ ಉತ್ತಮವಾಗಿ ಮಾಹಿತಿಯನ್ನು ನೀಡಿದರು. 
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶ್ರೀಮತಿ ವಿಜಯ ರವರು ಮಕ್ಕಳ ಹಕ್ಕುಗಳು ಮತ್ತು ಮಹಿಳೆಯರ ಕಾನೂನು ಕಾಯಿದೆಯ ಬಗ್ಗೆ, ಮಕ್ಕಳ ಮೇಲಿನ ದೌರ್ಜನ್ಯದ ಕುರಿತು ಮಾಹಿತಿ ನೀಡಿದರು.
ಈ ಮಾಹಿತಿ ಕಾರ್ಯಕ್ರಮದಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಎಂ.ಬಿ.ಕೆ, ಎಲ್.ಸಿ.ಆರ್.ಪಿ ಗಳು ಹಾಗೂ ಕೃಷಿ ಸಖಿಗಳು ಹಾಜರಿದ್ದರು.
ತಾಲೂಕು ಸಂಜೀವಿನಿ ಡಾಟಾ ಎಂಟ್ರಿ ಆಪರೇಟರ್ ಶ್ರೀನಿಧಿ ಪ್ರಾರ್ಥಿಸಿ, ತಾಲೂಕು ಸಮುದಾಯ ಸಂಪನ್ಮೂಲ ವ್ಯಕ್ತಿ ಪಂಚಾಯತ್ ರಾಜ್ ಸಂಸ್ಥೆಯ ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ ಸಂಪಾಜೆ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading