ದೇವಚಳ್ಳ : ಸ.ಹಿ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ

ದೇವಚಳ್ಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.09 ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಇಕೋ ಕ್ಲಬ್ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ ಸುಬ್ರಹ್ಮಣ್ಯ ಉಪ ವಿಭಾಗ, ಸುಳ್ಯ ವಲಯ ಇದರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಯಿತು. 
ಈ ಕಾರ್ಯಕ್ರಮವನ್ನು ನೆಲ್ಲೂರು ಕೆಮ್ರಾಜೆ ಶಾಖೆ ಉಪ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸೌಮ್ಯ.ಪಿ.ಎನ್ ರವರು ಶಾಲಾ ಪರಿಸರದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ “ಪ್ರಕೃತಿಯನ್ನು ಉಳಿಸಿದರೆ ಪ್ರಕೃತಿ ನಮ್ಮನ್ನು ಉಳಿಸುತ್ತದೆ” ಎಂದು ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.
ನಂತರ ಸಭಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಮುಖ್ಯಗುರುಗಳಾದ ಶ್ರೀಧರ.ಕೆ ಪರಿಸರ ಕಾಳಜಿ ಬಗ್ಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಜಯಾನಂದ ಪಟ್ಟೆ ವಹಿಸಿ ಪರಿಸರ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಕಾಳಜಿ ಮೂಡಿಸಿದರು.
ವೇದಿಕೆಯಲ್ಲಿ ಲಿಂಗಪ್ಪ ಕೊಪ್ಪ ಗಸ್ತು ಅರಣ್ಯ ಪಾಲಕರು ದೇವಚಳ್ಳ, ಶಿವಾನಂದ ಬಳಗನೂರು ಗಸ್ತು ಅರಣ್ಯ ಪಾಲಕರು ನೆಲ್ಲೂರು ಕೆಮ್ರಾಜೆ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ದಿವ್ಯ ಬಿ.ಎಲ್ ಉಪಸ್ಥಿತರಿದ್ದರು. 
ಶಾಲಾ ಮುಖ್ಯ ಗುರುಗಳಾದ ಕುಶಾಲಪ್ಪ ತುಂಬತ್ತಾಜೆ ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿದರು. ಸಹ ಶಿಕ್ಷಕರಾದ ಶ್ರೀಮತಿ ಹರಿಣಾಕ್ಷಿ ಪಿ.ಎ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಶಾರದಾ.ಟಿ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಪೋಷಕರು ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading