ನಿಧನ : ಶ್ರೀಧರ್ ಭಾಗವತ್ ಕಜ್ಜೋಡಿ

ಹರಿಹರ ಪಳ್ಳತ್ತಡ್ಕ ಗ್ರಾಮದ ಕಜ್ಜೋಡಿ ನಿವಾಸಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಧರ್ ಭಾಗವತ್ ರವರು ಜೂ.11 ರಂದು ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಅಧ್ಯಾಪಕ ವೃತ್ತಿಯಲ್ಲಿ ಧೀರ್ಘ ಕಾಲ ಸೇವೆ ಸಲ್ಲಿಸಿದ್ದ ಇವರು ಸಹಾಯಕ ಪ್ರಾಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಹಾಗೂ ಉಪನ್ಯಾಸಕರಾಗಿ ಕಡಬ, ಗುತ್ತಿಗಾರು, ದುಗ್ಗಲಡ್ಕ ಹಾಗೂ ಪಂಜ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ 22 ವರ್ಷಗಳ ಹಿಂದೆ ನಿವೃತ್ತಿಯನ್ನು ಹೊಂದಿದ್ದರು. ಇವರು ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿದ್ದರು.
ಮೃತರಿಗೆ 80 ವರ್ಷ ವಯಸ್ಸಾಗಿತ್ತು, ಮೃತರು ಪತ್ನಿ ಶ್ರೀಮತಿ ಸುಮಿತ್ರಾ ಭಾಗವತ್, ಪುತ್ರರಾದ ಶರತ್ ಭಾಗವತ್, ಶೈಲೇಶ್ ಭಾಗವತ್, ಪುತ್ರಿ ಶ್ರೀಮತಿ ಶಾಂತಲಾ ಮತ್ತು ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಇಂದು ಸಂಜೆ ನೆರವೇರಲಿದೆ ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading