ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಯಶಸ್ವಿ

. . . . . . . . .

ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರ್ಕಾರಿ ಆಸ್ಪತ್ರೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಬೃಹತ್ ರಕ್ತದಾನ ಶಿಬಿರ
ಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ 4ನೇ ಬೃಹತ್ ರಕ್ತದಾನ ಶಿಬಿರವು ಸರ್ಕಾರಿ ಆಸ್ಪತ್ರೆ ಸುಳ್ಯದಲ್ಲಿ ನಡೆಯಿತು.

. . . . . . .

ಸರ್ಕಾರಿ ಆಸ್ಪತ್ರೆ ಸುಳ್ಯದ ವೈದ್ಯಾಧಿಕಾರಿ ಡಾ. ನವೀನ್ ಎನ್.ಎಸ್., ರಕ್ತದಾನದ ಬಗ್ಗೆ ಮಾಹಿತಿ ನೀಡಿದರು. ಜೆಸಿ ವಲಯ ತರಬೇತುದಾರರು ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಕನ್ನಡ ಪ್ರಾಧ್ಯಪಕರಾದ ಡಾ. ಅನುರಾಧ ಕುರುಂಜಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಜೆಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಅಶೋಕ್ ಚೂoತಾರ್, ದಿನೇಶ್ ಮಡಪ್ಪಾಡಿ, ಆಂಬುಲೆನ್ಸ್ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಅರoತೋಡು
ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸಂತೋಷ್ ಕುಮಾರ್ ಬಿ.ಪಿ., ಹಾಗೂ ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಲತಾಶ್ರೀ ಸುಪ್ರೀತ್ ಮೊಂಟಡ್ಕ ಉಪಸ್ಥಿತರಿದ್ದು
ಜೀವ ಉಳಿಸುವಲ್ಲಿ ರಕ್ತದಾನದ ಪಾತ್ರದ ಕುರಿತು ಮಾತನಾಡಿ, ಸಮಾಜಮುಖಿ ಕಾರ್ಯಗಳಲ್ಲಿ ಯುವಜನತೆ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಸುಳ್ಯ ಸರಕಾರಿ ಆಸ್ಪತ್ರೆಯ ಡಾ. ಶಾಲಿನಿ, ಡಾ ಸೌಮ್ಯ, ಡಾ. ರಜನಿ, ಡಾ. ಶಿವಕುಮಾರ್ ರಕ್ತದಾನದ ಮಹತ್ವವನ್ನು ತಿಳಿಸಿದರು.

ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆದ ಶಿಬಿರದಲ್ಲಿ ಸಾರ್ವಜನಿಕರು, ಯುವಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ವೈದ್ಯಾಧಿಕಾರಿಗಳ ತಂಡ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಶಿಬಿರದ ಯಶಸ್ಸಿಗೆ ಜೇಸಿಐ ಸದಸ್ಯರು, ಆಸ್ಪತ್ರೆಯ ಸಿಬ್ಬಂದಿಗಳು, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಸಹಕರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading