ಜೇಸಿಐ ಸುಳ್ಯ ಪಯಸ್ವಿನಿಯಿಂದ ರಕ್ತದಾನ ಜಾಗೃತಿ ಕಾರ್ಯಾಗಾರ – ರಕ್ತದಾನಿ ಶೈಲೇಶ್ ಅಂಬೆಕಲ್ಲು ಅವರಿಗೆ “ರಕ್ತದಾನ ಸೇವಾ ರತ್ನ ಪ್ರಶಸ್ತಿ” ಪ್ರದಾನ

ಸುಳ್ಯ, ಜೂ. 16; ರಕ್ತಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆ ಇಲ್ಲ. ರಕ್ತದಾನದಿಂದ ಅನೇಕ ಜೀವಗಳನ್ನು ಉಳಿಸಬಹುದಾಗಿದ್ದು, ಒಬ್ಬ ವ್ಯಕ್ತಿ ನೀಡುವ ರಕ್ತವು ಮೂರು ಮಂದಿಯ ಜೀವ ಉಳಿಸಲು ಸಹಕಾರಿಯಾಗುತ್ತದೆ. ರಕ್ತದಾನವು ವ್ಯಕ್ತಿಯ ಆರೋಗ್ಯ ಸ್ಥಿತಿಯ ಅರಿವಿಗೂ ಸಹಕಾರಿ ಎಂದು ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ. ಅವಿನಾಶ್ ಎಸ್. ಹೇಳಿದರು.

. . . . . . . . .

ಅವರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಡಾ| ಕುರುಂಜಿ ವೆಂಕಟ್ರಮಣ ಗೌಡ ಸಭಾ ವೇದಿಕೆಯಲ್ಲಿ ಜೂ. 16ರಂದು ನಡೆದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನ ಜಾಗೃತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ ಎ.ಎಸ್. ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

. . . . . . .

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಅಧ್ಯಕ್ಷ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿದ್ದರು.
109ನೇ ಬಾರಿ ರಕ್ತದಾನ ಮಾಡುವುದರೊಂದಿಗೆ, ಮಾನವೀಯತೆಯ ಅಪೂರ್ವ ಮಾದರಿಯೊಂದಿಗೆ, ನಿಸ್ವಾರ್ಥ ಸೇವೆಯ ಮೂಲಕ ಸಮಾಜಕ್ಕೆ ಪ್ರೇರಣೆಯಾಗುತ್ತಾ, ಜೀವ ಉಳಿಸುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವ ದೇವಚಳ್ಳ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅವರಿಗೆ “ರಕ್ತದಾನ ಸೇವಾ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸುಳ್ಯದ ಜೇಸಿಐ ಸುಳ್ಯ ಪಯಸ್ವಿನಿ(ರಿ.) ಯ ಪೂರ್ವ ಸದಸ್ಯರು ಮತ್ತು ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ(ನಿ.), ಪುತ್ತೂರು ಇದರ ಅಧ್ಯಕ್ಷರು ಜೇಸಿ ಚಂದ್ರ ಕೋಲ್ಟಾರ್, ನಿಕಟ ಪೂರ್ವಾಧ್ಯಕ್ಷರು ಜೆ.ಎಫ್.ಎಂ ಸುರೇಶ್ ಕಾಮತ್, ಕಾರ್ಯಕ್ರಮದ ಸಂಯೋಜಕರು ಜೇಸಿ ಮಹೇಶ್ ಮೇರ್ಕಜೆ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್. ಎಚ್. ಸ್ವಾಗತಿಸಿ, ಜೇಸಿ ಪ್ರಶಾಂತ್ ಅಂಬೇಕಲ್ಲು ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಜೇಸಿ. ತಾರಾ ಮಾಧವ ಚೂಂತಾರು ವಂದಿಸಿದರು. ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading