ಸುಳ್ಯ ತಾಲೂಕು ಪಿಂಚಣಿದಾರರ ಸಂಘದ 46ನೇ ವಾರ್ಷಿಕ ಮಹಾಸಭೆ

ಸುಳ್ಯ, ಜೂ.17: ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ 2025-26ನೇ ಸಾಲಿನ 46ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಡಾ. ಎಸ್. ರಂಗಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆಯಿತು.

. . . . . . . . .

ಸಂಘದ ಕಾರ್ಯದರ್ಶಿ ಎ. ಅಬ್ದುಲ್ಲ ಅವರು 2025-26ನೇ ಸಾಲಿನ ಆಡಳಿತ ವರದಿಯನ್ನು ಮಂಡಿಸಿದರು. ಖಜಾಂಚಿ ಯು. ಸುಬ್ರಹ್ಮಣ್ಯ ಹೊಳ್ಳ ಅವರು ವಾರ್ಷಿಕ ಲೆಕ್ಕಪತ್ರ, ಲೆಕ್ಕಪರಿಶೋಧಕರ ವರದಿ ಹಾಗೂ ಪ್ರಸಕ್ತ ಸಾಲಿನ ಅಂದಾಜು ಆಯವ್ಯಯ ಪಟ್ಟಿಯನ್ನು ಮಂಡಿಸಿ ಸಭೆಯ ಅನುಮೋದನೆ ಪಡೆದುಕೊಂಡರು.

. . . . . . .

ಈ ಸಂದರ್ಭದಲ್ಲಿ 2025-26ನೇ ಸಾಲಿನ ಸಂಧ್ಯಾರಶ್ಮಿ ವಿಶೇಷ ಸಂಚಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ ಬಿಡುಗಡೆಗೊಳಿಸಿದರು. ಸಂಚಿಕೆ ಕುರಿತು ಉಪಸಂಪಾದಕ ಎಂ. ಸುಬ್ರಹ್ಮಣ್ಯ ಹೊಳ್ಳ ಮಾತನಾಡಿದರು.

‘ಇಮಾಮು ಸಾಹೇಬರ ಕುದುರೆ’ ಕಾದಂಬರಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ’ ವೈ.ಎಸ್. ಹರಗಿ ಅವರನ್ನು ಹಾಗೂ 90 ವರ್ಷ ದಾಟಿದ ಪುಂಗವ ಗೌಡ ಸುಬ್ರಹ್ಮಣ್ಯ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಕಳೆದ ವರ್ಷದಲ್ಲಿ ನಿಧನರಾದ ಸಂಘದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಎಂ.ವಿ. ಗಿರಿಜಾ ಪ್ರಾರ್ಥಿಸಿ, ಉಪಾಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ಸ್ವಾಗತಿಸಿ, ಜತೆ ಕಾರ್ಯದರ್ಶಿ ಗೋಪಾಲ ರಾವ್ ವಂದಿಸಿ, ಸಾರ್ವಜನಿಕ ಸಂಪರ್ಕಾಧಿಕಾರಿ ಚೆನ್ನಕೇಶವ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading