ಸುಳ್ಯ : ಭಾಜಪಾ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಹೊಸ ಸಮಿತಿ ಪದಾಧಿಕಾರಿಗಳ ಸಭೆಯು ಜೂ.17 ರಂದು ಸುಳ್ಯದಲ್ಲಿ ನಡೆಯಿತು. 

. . . . . . . . .

ಮಂಡಲ ಅಧ್ಯಕ್ಷರಾದ ವೆಂಕಟ್ ವಲಳಂಬೆ ಅವರು ಹೊಸ ಪದಾಧಿಕಾರಿಗಳ ಘೋಷಣೆ ಮಾಡಿದರು, ಜಿಲ್ಲಾ ಒಬಿಸಿ ಅಧ್ಯಕ್ಷರಾದ ಮಹೇಶ್ ಜೋಗಿ ಹೊಸ ಸಮಿತಿ ಪದಾಧಿಕಾರಿಗಳಿಗೆ ಶುಭ ಹಾರೈಸಿ “ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಿ ಮಂಡಲದಲ್ಲಿ ಒಬಿಸಿ ಸಮುದಾಯದ ಮನೆ ಮನ ಗಳನ್ನು ಗುರುತಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುವಂತೆ” ಕಿವಿಮಾತು ನುಡಿದರು. ಮಂಡಲ ಒಬಿಸಿ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಹೊಸ ಸಮಿತಿಯ ಸದಸ್ಯರ ಜವಾಬ್ದಾರಿಗಳು ಮತ್ತು ಕಾರ್ಯಗಳ ಬಗ್ಗೆ ತಿಳಿಸಿದರು, ಶಶಿಧರ ಕಲ್ಮಂಜ ಮಂಡಲ ಒಬಿಸಿ ಉಸ್ತುವಾರಿಗಳು ಮಂಡಲ ಸಮಿತಿಗೆ ಶುಭ ಹಾರೈಸಿದರು.

. . . . . . .

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕಂದಡ್ಕ, ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ ರಾವ್, ವಿನೋದ್ ಬೆಳ್ಳಯಾರು, ಜಿಲ್ಲಾ ಒಬಿಸಿ ಕಾರ್ಯದರ್ಶಿಗಳಾದ ಚಂದ್ರಶೇಖರ್ ಪನ್ನೆ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೆದಪ್ಪ, ಮಂಡಲ ಪ್ರಬಾರಿ ಭಾರತಿಯವರು ಉಪಸ್ಥಿತರಿದ್ದರು. 

ಇದೇ ಸಂದರ್ಭದಲ್ಲಿ ಮಂಗಳೂರಿನ ಪ್ರತಿಷಿತ ಬಾರ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಒಬಿಸಿ ಜಿಲ್ಲೆಯ ಅಧ್ಯಕ್ಷರಾದ ಮಹೇಶ್ ಜೋಗಿ ಅವರನ್ನು ಮತ್ತು ಬಾರ್ ಅಸೋಸಿಯೇಷನ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಮತ್ತು ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಒಬಿಸಿಯ ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ ಅವರನ್ನು ಕೂಡ ಸನ್ಮಾನಿಸಲಾಯಿತು. ವಂದೇಮಾತರಂ ನೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ ಮಂಡಲ ಪ್ರಧಾನ ಕಾರ್ಯದರ್ಶಿ ಅಶೋಕ್ ಅಡ್ಕರ್ ಅವರು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ, ಸದಾನಂದ ಆಚಾರ್ಯ ಅವರು ವಂದನಾರ್ಪಣೆಗೈದರು. ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಚಂದ್ರಾವತಿಯವರು ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading