ಸುಳ್ಯ ಶ್ರೀ ಕಲ್ಕುಡ ದೈವಸ್ಥಾನದ ನವೀಕೃತ ಶಿಲಾಮಯ ಗುಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವ | ದೇವಸ್ಥಾನ ಮತ್ತು ದೈವಸ್ಥಾನಗಳು ಧಾರ್ಮಿಕ ಮೌಲ್ಯ ಭೋಧನೆಯ ಕೇಂದ್ರ: ಸಚ್ಚಿದಾನಂದ ಭಾರತಿ ಸ್ವಾಮೀಜಿ

ದೇವಸ್ಥಾನಗಳು ಮತ್ತು ದೈವಸ್ಥಾನಗಳು ಸಮಾಜಕ್ಕೆ ಸಂಸ್ಕಾರ ಮತ್ತು ಧಾರ್ಮಿಕ ಮೌಲ್ಯಗಳನ್ನು ಬೋಧಿಸುವ ಕೇಂದ್ರಗಳಾಗಿದ್ದು, ಎಲ್ಲರನ್ನು ಒಗ್ಗೂಡಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮೀಜಿಗಳು ಹೇಳಿದರು.

. . . . . . . . .

ಅವರು ಜೂ. 18ರಂದು ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

. . . . . . .

ಧರ್ಮ, ದೇವಸ್ಥಾನ, ದೈವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳ ಬಗ್ಗೆ ಇರುವ ಬದ್ಧತೆಯೇ ಜೀರ್ಣೋದ್ಧಾರದಂತಹ ಮಹತ್ವದ ಕಾರ್ಯಗಳಿಗೆ ಪ್ರೇರಣೆಯಾಗುತ್ತದೆ. ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಮತ್ತು ಸಂಸ್ಕಾರಗಳನ್ನು ಬೆಳೆಸುವ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಕುಡ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ವಹಿಸಿದ್ದರು. ದೈವಸ್ಥಾನದ ಆಡಳಿತ ಧರ್ಮದರ್ಶಿ ಪಿ.ಕೆ. ಉಮೇಶ್ ಪುನರ್ ಪ್ರತಿಷ್ಠಾ ಕಲಶೋತ್ಸವದ ವರದಿಯನ್ನು ಮಂಡಿಸಿದರು.

ವೇದಿಕೆಯಲ್ಲಿ ಬ್ರಹ್ಮಶ್ರೀ ವೇ|| ಮೂ| ದೇಲಂಪಾಡಿ ಗಣೇಶ ತಂತ್ರಿ, , ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ, ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ ಉಪಸ್ಥಿತರಿದ್ದರು.
ದಿನೇಶ್ ಮಡಪ್ಪಾಡಿ ಸ್ವಾಗತಿಸಿ, ಕೈಲಾಶ್ ಶೆಣೈ ಪ್ರಾರ್ಥಿಸಿ, ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜೂ.17ರಂದು ಬೆಳಿಗ್ಗೆ ಶ್ರೀ ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ, ಶ್ರೀ ದೈವಗಳಿಗೆ ತಂಬಿಲ, ಮಹಾಪೂಜೆ, ನಿತ್ಯ ನೈಮಿತ್ಯಾಧಿಗಳ ನಿರ್ಣಯ, ಪ್ರಸಾದ ವಿತರಣೆ, ಭೋಜನ ಪ್ರಸಾದ ವಿತರಣೆ ನಡೆಯಿತು.

ದೇಲಂಪಾಡಿ ಬ್ರಹ್ಮಶ್ರೀ ವೇ. ಗಣೇಶ್ ತಂತ್ರಿವರ್ಯರ ಮಾರ್ಗದರ್ಶನದಲ್ಲಿ ನವೀಕೃತ ಶಿಲಾಮಯ ಗುಡಿಯಲ್ಲಿ ಶ್ರೀ ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ಕಟ್ಟೆಯಲ್ಲಿ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವವು ನಡೆಯಿತು.
ಜೂ‌.15ರಂದು ಪೂರ್ವಾಹ್ನ ಭಾಗವತ ದಶಮ ಸ್ಕಂದ ಪಾರಾಯಣ, ನಾರಾಯಣ ಮೂರ್ತಿ ಕಾಂಞಂಗಾಡ್ ಅವರಿಂದ ಸುದರ್ಶನ ಹೋಮ, ಪ್ರೇತವಾಹನೆ, ಭಾಧೋಚ್ಚಾಟನೆ, ಆವಾಹನೆ ಬಲಿ ನಡೆಯಿತು.
ಜೂ.16ರಂದು ಬೆಳಿಗ್ಗೆ ಗಣಪತಿ ಹೋಮ, ತಿಲಹೋಮ, ಪವಮಾನ ಹೋಮ, ಚಕ್ರಾಬ್ಜಪೂಜೆ ನಡೆಯಿತು. ಬಳಿಕ ಭಾಗವತ ದಶಮ ಸ್ಕಂದ ಪಾರಾಯಣದ ಮಹತ್ವ ವಿವರಣೆ ನಡೆಯಿತು.
ಜೂ‌.17ರಂದು ಸಾಯಂಕಾಲ ಭಜನೆ, ಬಳಿಕ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ ನಡೆಯಿತು .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading