ಬಾಳಿಲ : ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂ.19 ಶುಕ್ರವಾರದಂದು ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ದೀಪ ಬೆಳಗಿಸಿ ಶಾಲಾ ಭಿತ್ತಿಪತ್ತಿಕೆ “ವಿದ್ಯಾಕುಸುಮ”ವನ್ನು ಅನಾವರಣಗೈದು “ನಾವು ಮತ್ತು ಪ್ರಕೃತಿ” ಎನ್ನುವ ವಿಷಯದಲ್ಲಿ ಮಾತನಾಡಿದರು. “ಈ ಭೂಮಿ ನಮ್ಮದಲ್ಲ ಮುಂದೆ ಹುಟ್ಟಬೇಕಾದ ಮಗುವಿನದ್ದು…, ಅದನ್ನು ಉಳಿಸುವ ಜವಾಬ್ದಾರಿ ನಮ್ಮದು” ಎಂಬ ಅಭಿಪ್ರಾಯದ ಮಾತುಗಳೊಂದಿಗೆ ವಿದ್ಯಾರ್ಥಿಗಳನ್ನು ಮತ್ತು ಸೇರಿದ ವಿದ್ಯಾಭಿಮಾನಿಗಳನ್ನು ಮಂತ್ರಮುಗ್ಧರನ್ನಾಗುವಂತೆ ಮಾಡಿದರು.

. . . . . . . . .

ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ರಾಧಾಕೃಷ್ಣ ರಾವ್.ಯು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾಸಂಸ್ಥೆಗಳ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭಕೋರಿದರು. ವಿದ್ಯಾಬೋಧಿನೀ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ಬರಮೇಲು, ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸೀತಾರಾಮ ಕಾಯಾರ, ಪ್ರೌಢಶಾಲೆಯ ಪಿ.ಟಿ.ಎ ಅಧ್ಯಕ್ಷ ರಮೇಶ್ ಕಾಚಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುವಿಚಾರ ಸಾಹಿತ್ಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

. . . . . . .

ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ ಎಸ್ ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ಸಂಘದ ಸಂಯೋಜಕರಾದ ಸಹಶಿಕ್ಷಕ ಲೋಕೇಶ್.ಬಿ ಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಕೃತ ಭಾಷಾ ಶಿಕ್ಷಕ ವೆಂಕಟೇಶ್ ಕುಮಾರ್.ಯು ವಂದಿಸಿದ ಈ ಕಾರ್ಯಕ್ರಮವನ್ನು 10ನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ರಕ್ಷಾ ಆರ್.ಕೆ ಮತ್ತು ಸಾಯಿ ಸುನಿಷ್ಠಾ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading