ಸರ್ಕಾರದ ಅನುದಾನವನ್ನು ತಮ್ಮದೇ ಅನುದಾನ ಎಂಬಂತೆ ಬಿಂಬಿಸಬಾರದು: ವೆಂಕಪ್ಪ ಗೌಡ

ಸುಳ್ಯ, ಜೂ. 20: ಕರ್ನಾಟಕ ಸರ್ಕಾರದಿಂದ ಮಂಜೂರಾಗಿರುವ ಅನುದಾನವನ್ನು ತಮ್ಮದೇ ಅನುದಾನ ಎಂಬಂತೆ ಬಿಂಬಿಸಿಕೊಳ್ಳುತ್ತಿರುವುದು ಸರಿಯಲ್ಲ. ಸ್ಥಳೀಯ ಹಾಗೂ ರಾಜ್ಯ ಮಟ್ಟದ ಜನಪ್ರತಿನಿಧಿಗಳು ಮತ್ತು ನಾಯಕರನ್ನು ಶಿಷ್ಟಾಚಾರದಂತೆ ಆಹ್ವಾನಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ವೆಂಕಪ್ಪ ಗೌಡ ಅಭಿಪ್ರಾಯಪಟ್ಟರು.

. . . . . . . . .

ಅವರು ಸುಳ್ಯದ ಪತ್ರಿಕಾ ಭವನದಲ್ಲಿ ಜೂ. 20 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾಖಲೆಗಳ ಪ್ರಕಾರ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ 25 ಕೋಟಿ ರೂ. ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಗೆ 50 ಲಕ್ಷ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 20.95 ಲಕ್ಷ ರೂ., ನಗರಾಭಿವೃದ್ಧಿ ಇಲಾಖೆಗೆ 2.20 ಲಕ್ಷ ರೂ., ಮುಜರಾಯಿ ಇಲಾಖೆಗೆ 0.80 ಕೋಟಿ ರೂ. ಹಾಗೂ ಶಿಕ್ಷಣ ಕ್ಷೇತ್ರಕ್ಕೆ 0.50 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದರು. ಈ ಅನುದಾನದಲ್ಲಿ ಕೊಡಿಯಾಲಬೈಲು ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿದರು.

. . . . . . .

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ, ರಾಜ್ಯದ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಸರ್ಕಾರ ವಿವಿಧ ಕ್ಷೇತ್ರಗಳಿಗೆ ಅನುದಾನ ಹಂಚಿಕೆ ಮಾಡಿದೆ. ಅದರಂತೆ ಸುಳ್ಯದ ಸರಕಾರಿ ಕಾಲೇಜು, ವಸತಿ ನಿಲಯ, ಸಮುದಾಯ ಭವನ ಸೇರಿದಂತೆ, ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಕೊಡಿಯಾಲಬೈಲು ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ಒಂದು ಮನೆ ಅಭಿವೃದ್ಧಿಯಾದರೂ ಆ ಗ್ರಾಮದ ಅಭಿವೃದ್ಧಿಗೆ ಅದು ಪೂರಕವಾಗುತ್ತದೆ. ಹೀಗಾಗಿ ತಾಲೂಕಿನ ಜನರ ಜೀವನಮಟ್ಟ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಮಾಜಿ ಅಧ್ಯಕ್ಷ ಪಿ.ಸಿ. ಜಯರಾಮ ಹಾಗೂ ಎಂ.ಜೆ. ಶಶಿಧರ್ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading